ಸಂಗ್ರಹ ಚಿತ್ರ 
ಕ್ರಿಕೆಟ್

4ನೇ ಟಿ20 ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ, 3 ವಿಕೆಟ್ ಪತನ!

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಎದುರಿಸಿದ್ದು 56 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ರಾಜ್ಕೋಟ್: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಎದುರಿಸಿದ್ದು 56 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ರಾಜ್ಕೋಟ್ ನಲ್ಲಿ ನಡೆಯುತ್ತಿರುವ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 10 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು 56 ರನ್ ಪೇರಿಸಿದೆ. 

ಆರಂಭಿಕರಾಗಿ ಕಣಕ್ಕಿಳಿದ ರಿತುರಾಜ್ ಗಾಯಕ್ವಾಡ್ 5 ರನ್ ಗಳಿಸಿ ಔಟಾದರೆ, ಇಶಾನ್ ಕಿಶನ್ 27 ರನ್ ಗಳಿಸಿದ್ದಾರೆ. ಇನ್ನು ಯುವ ಆಟಗಾರ ಶ್ರೇಯಸ್ ಅಯ್ಯರ್ 4 ವಿಕೆಟ್ ಗಳಿಗೆ ಔಟಾಗಿ ಪೆವಿಲಿಯನ್ ಸೇರಿದರು. ಸದ್ಯ ರಿಷಬ್ ಪಂತ್ ಅಜೇಯ 13 ಹಾಗೂ ಹಾರ್ದಿಕ್ ಪಾಂಡ್ಯ 9 ರನ್ ಗಳಿಸಿ ಆಡುತ್ತಿದ್ದಾರೆ.

ದಕ್ಷಿಣ ಆಫ್ರಿಕಾ ಪರ ಜಸೇನ್, ಎನ್ಗಡಿ ಮತ್ತು ಅನ್ರಿಚ್ ನಾರ್ಟ್ಜೆ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT