ಭಾರತಕ್ಕೆ ಜಯ 
ಕ್ರಿಕೆಟ್

ಶ್ರೀಲಂಕಾ ಪ್ರವಾಸ: ಭಾರತ ವನಿತೆಯರಿಗೆ ಮೊದಲ ಟಿ20ಯಲ್ಲಿ 34 ರನ್ ಗೆಲುವು!

ಇಂದಿನಿಂದ ಆರಂಭವಾಗಿರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ವನಿತೆಯರ ಕ್ರಿಕೆಟ್ ತಂಡ ತನ್ನ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವನಿತೆಯರ ತಂಡವನ್ನು 34 ರನ್ ಗಳ ಅಂತರದಲ್ಲಿ ಮಣಿಸಿದೆ.

ದಂಬುಲಾ: ಇಂದಿನಿಂದ ಆರಂಭವಾಗಿರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ವನಿತೆಯರ ಕ್ರಿಕೆಟ್ ತಂಡ ತನ್ನ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವನಿತೆಯರ ತಂಡವನ್ನು 34 ರನ್ ಗಳ ಅಂತರದಲ್ಲಿ ಮಣಿಸಿದೆ.

ದಂಬುಲಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶಫಾಲಿ ವರ್ಮಾ (31 ರನ್), ನಾಯಕಿ ಹರ್ಮನ್ ಪ್ರೀತ್ ಕೌರ್ (22 ರನ್) ಮತ್ತು ರಾಡ್ರಿಗಸ್ (ಅಜೇಯ 36)ರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 138ರನ್ ಗಳಿಸಿತು. 

ಈ ಸವಾಲಿನ ಮೊತ್ತವನ್ನು ಬೆನ್ನು ಹತ್ತಿದ ಶ್ರೀಲಂಕಾ ವನಿತೆಯರ ತಂಡ ಭಾರತದ ಕರಾರುವಕ್ಕಾದ ಬೌಲಿಂಗ್ ದಾಳಿಯಿಂದಾಗಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 104 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 34 ರನ್ ಗಳ ಅಂತರದಲ್ಲಿ ಸೋಲುಂಡಿತು. ಈ ಗೆಲುವಿನ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 1–0 ರಲ್ಲಿ ಮುನ್ನಡೆ ಗಳಿಸಿತು.

ಇನ್ನು ಬೌಲಿಂಗ್ ನಲ್ಲಿ ರಾಧಾ ಯಾದವ್ 2 ವಿಕೆಟ್ ಕಬಳಿಸಿದರೆ, ಶಫಾಲಿ ವರ್ಮಾ, ಪೂಜಾ ವಸ್ತ್ರಾಕರ್ ಮತ್ತು ದೀಪ್ತಿ ಶರ್ಮಾ ತಲಾ 1 ವಿಕೆಟ್ ಪಡೆದರು. ಭಾರತದ ಪರ ಅಜೇಯ ಆಟವಾಡಿ ಸವಾಲಿನ ಮೊತ್ತಕ್ಕೆ ಕಾರಣರಾದ ಜೆಮಿಮಾ ರಾಡ್ರಿಗಸ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?