ರೋಹಿತ್ ಶರ್ಮಾ 
ಕ್ರಿಕೆಟ್

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-19 ಪಾಸಿಟಿವ್!

ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ

ಮುಂಬೈ: ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಇರುವಂತೆಯೇ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಲೀಸೆಸ್ಟರ್‌ಶೈರ್ ವಿರುದ್ಧ ನಾಲ್ಕು ದಿನಗಳ ಅಭ್ಯಾಸ ಪಂದ್ಯದಲ್ಲಿ ಆಡುತ್ತಿದ್ದ ರೋಹಿತ್ ಅವರನ್ನು ಕ್ವಾರಂಟೈನ್‌ಗೆ ಸ್ಥಳಾಂತರಿಸಲಾಗಿದೆ.

ಅಭ್ಯಾಸ ಪಂದ್ಯದ ಮೂರನೇ ದಿನದಾಟದ ನಂತರ ರೋಹಿತ್ ಗೆ ಕೊರೋನಾ ಪಾಸಿಟಿವ್ ಆಗಿರುವುದು ಸುದ್ದಿ ಬಹಿರಂಗವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 25 ರನ್ ಗಳಿಸಿದ ರೋಹಿತ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಮಾಡಿರಲಿಲ್ಲ. ಇದಕ್ಕೂ ಮುನ್ನ ರವಿಚಂದ್ರನ್ ಅಶ್ವಿನ್ ಭಾರತ ತೊರೆಯುವ ಮುನ್ನ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಮುಂಬರುವ ಟೆಸ್ಟ್‌ಗೆ ಆಗಮಿಸುವುದು ವಿಳಂಬವಾಯಿತು.

ಈ ಕುರಿತು ಟ್ನೀಟ್ ಮಾಡಿರುವ ಬಿಸಿಸಿಐ, ಶನಿವಾರ ರಾಪಿಡ್ ಆಂಟಿಜಿನ್ ಟೆಸ್ಟ್ ನಡೆಸಿದ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಅವರು ಪ್ರಸ್ತುತ ತಂಡದ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿದ್ದಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ ಎಂದು ತಿಳಿಸಿದೆ.

 ರೋಹಿತ್ ಶರ್ಮಾ ಗುಣಮುಖರಾದ ನಂತರ   ಜುಲೈ 1 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ಪ್ರಾರಂಭವಾಗುವ  ಐದನೇ ಟೆಸ್ಟ್‌ನಲ್ಲಿ ರೋಹಿತ್ ಇಂಗ್ಲೆಂಡ್ ವಿರುದ್ಧ ತಂಡವನ್ನು ಮುನ್ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT