ಇಯಾನ್ ಮೋರ್ಗಾನ್ 
ಕ್ರಿಕೆಟ್

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ತಂಡದ ನಾಯಕ ಇಯಾನ್ ಮೋರ್ಗಾನ್ ಗುಡ್ ಬೈ!

ಇಂಗ್ಲೆಂಡ್‌ನ ಕ್ರಿಕೆಟ್(ODI-T20) ತಂಡದ ನಾಯಕ ಇಯಾನ್ ಮೋರ್ಗಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಮೋರ್ಗನ್, ಟೀಂ ಇಂಡಿಯಾ ವಿರುದ್ಧದ ಸರಣಿಗೂ ಮುನ್ನವೇ...

ಲಂಡನ್: ಇಂಗ್ಲೆಂಡ್‌ನ ಕ್ರಿಕೆಟ್(ODI-T20) ತಂಡದ ನಾಯಕ ಇಯಾನ್ ಮೋರ್ಗಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಮೋರ್ಗನ್, ಟೀಂ ಇಂಡಿಯಾ ವಿರುದ್ಧದ ಸರಣಿಗೂ ಮುನ್ನವೇ ಈ ನಿರ್ಧಾರ ಕೈಗೊಂಡಿದ್ದು 16 ವರ್ಷದ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

ಭಾರತ ತಂಡ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದೆ. ಇಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಂದು ಟೆಸ್ಟ್, ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಸೀಮಿತ ಓವರ್‌ಗಳ (ODI-T20) ಸರಣಿಯು ಜುಲೈ 7 ರಿಂದ ಪ್ರಾರಂಭವಾಗಲಿದೆ.

ಇತ್ತೀಚೆಗೆ ಮೋರ್ಗನ್ ನಿವೃತ್ತಿ ಘೋಷಿಸಬಹುದು ಎಂದು ಮಾಧ್ಯಮ ವರದಿಗಳಲ್ಲಿ ಹೇಳಲಾಗಿತ್ತು. ಆದರೆ ಅದು ಇಂದು ನಿಜವೂ ಆಗಿದೆ. ಮೋರ್ಗಾನ್ ಇಂಗ್ಲೆಂಡ್‌ನ ಅತ್ಯಂತ ಯಶಸ್ವಿ ಏಕದಿನ ನಾಯಕರಾಗಿದ್ದರು. ಅವರು ತಮ್ಮ ನಾಯಕತ್ವದಲ್ಲಿ ಮೊದಲ ಬಾರಿಗೆ ಇಂಗ್ಲೆಂಡ್ ಏಕದಿನ ವಿಶ್ವಕಪ್(2019) ಪ್ರಶಸ್ತಿಯನ್ನು ಗೆದ್ದುಕೊಳ್ಳಲು ಸಾಧ್ಯವಾಗಿತ್ತು. ಮೋರ್ಗಾನ್ 126 ಏಕದಿನ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು. ಇದರಲ್ಲಿ ತಂಡವು 76 ಬಾರಿ ಗೆಲುವು ಸಾಧಿಸಿದೆ.

ಮೋರ್ಗಾನ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 248 ಒಡಿಐಗಳನ್ನು ಆಡಿದ್ದಾರೆ. 14 ಶತಕಗಳೊಂದಿಗೆ 7701 ರನ್ ಗಳಿಸಿದ್ದಾರೆ. ಟೆಸ್ಟ್ ವಿಭಾಗದಲ್ಲಿ ಮೋರ್ಗಾನ್‌ಗೆ ಹೆಚ್ಚಿನ ಅವಕಾಶ ಸಿಗಲಿಲ್ಲ. ಅವರು 16 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 2 ಶತಕಗಳೊಂದಿಗೆ 700 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!