ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

ಪಾಕಿಸ್ತಾನದ ಪ್ರಾಬಲ್ಯ ಮುರಿದ ಭಾರತ: ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಸೂರ್ಯ ಕುಮಾರ್ ಯಾದವ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಅಡಿಲೇಡ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ನಡೆಸುತ್ತಿರುವ ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಎರಡು ಅರ್ಧಶತಕಗಳನ್ನು ಸಿಡಿಸಿದ ನಂತರ ಭಾರತದ ಸೂರ್ಯಕುಮಾರ್ ಯಾದವ್ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ T20I ಆಟಗಾರರ ಶ್ರೇಯಾಂಕದಲ್ಲಿ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ಸಿಡ್ನಿಯಲ್ಲಿ ನೆದರ್ಲೆಂಡ್ ವಿರುದ್ಧ 25 ಎಸೆತಗಳಲ್ಲಿ ಔಟಾಗದೆ 51 ರನ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಪರ್ತ್‌ನಲ್ಲಿ 40 ಎಸೆತಗಳಲ್ಲಿ 68 ರನ್ ಗಳಿಸಿದ ಯಾದವ್ ಅವರು ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ್ದಾರೆ. ಈ ಇಬ್ಬರು ಆಟಗಾರರು ಈ ವರ್ಷ ಸೆಪ್ಟೆಂಬರ್ 4 ರಿಂದ ಇಬ್ಬರು ಆಟಗಾರರು ಅಗ್ರ 2ಸ್ಥಾನವನ್ನು ಹೊಂದಿದ್ದರು. ಆದರೀಗ ಈ ಸ್ಥಾನಕ್ಕೆ ಸೂರ್ಯ ಕುಮಾರ್ ಯಾದವ್ ಪಡೆದಿದ್ದಾರೆ.

ಯಾದವ್ T20I ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ 23 ನೇ ಆಟಗಾರರಾಗಿದ್ದು, ಸೆಪ್ಟೆಂಬರ್ 2014 ರಿಂದ ಡಿಸೆಂಬರ್ 2017 ರವರೆಗೆ ವಿವಿಧ ಅವಧಿಗಳಲ್ಲಿ ಭಾರತದ ವಿರಾಟ್ ಕೊಹ್ಲಿ 1,013 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದರು. ಆವರ ಬಳಿಕ T20 ಕ್ರಿಕೆಟ್‌ನಲ್ಲಿ ನಂ. 1 ತಲುಪಿದ ಎರಡನೇ ಭಾರತೀಯ ಆಟಗಾರ ಎಂಬ ಕೀರ್ತಿಗೆ ಸೂರ್ಯ ಕುಮಾರ್ ಯಾದವ್ ಭಾಜನರಾಗಿದ್ದಾರೆ. ಪ್ರಸ್ತುತ ಸೂರ್ಯ ಕುಮಾರ್ ಯಾದವ್ 863 ರೇಟಿಂಗ್ ಅಂಕಗಳನ್ನು ಹೊಂದಿದ್ದು, ಇದು ಭಾರತೀಯ ಆಟಗಾರರ ಎರಡನೇ ಅತ್ಯುತ್ತಮ ರೇಟಿಂಗ್ ಆಗಿದೆ, ಸೆಪ್ಟೆಂಬರ್ 2014 ರಲ್ಲಿ ಕೊಹ್ಲಿ ಗಳಿಸಿದ 897 ರೇಟಿಂಗ್ ನೊಂದಿಗೆ ಅಗ್ರ ಸ್ಥಾನದಲ್ಲಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT