ಶಿಖರ್ ಧವನ್ 
ಕ್ರಿಕೆಟ್

ಐಪಿಎಲ್ 2023: ಕನ್ನಡಿಗ ಮಯಾಂಕ್ ಸ್ಥಾನಕ್ಕೆ ಕುತ್ತು, ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ 

ಐಪಿಎಲ್ 2023 ಟೂರ್ನಿಗೆ ಟೀಂ ಇಂಡಿಯಾ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಆಗಲಿದ್ದಾರೆ. 

ನವದೆಹಲಿ: ಐಪಿಎಲ್ 2023 ಟೂರ್ನಿಗೆ ಟೀಂ ಇಂಡಿಯಾ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಆಗಲಿದ್ದಾರೆ. ಬುಧವಾರ ನಡೆದ ಪಂಜಾಬ್ ಕಿಂಗ್ಸ್ ಬೋರ್ಡ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಬಾರಿಯ ಐಪಿಎಲ್ ನಲ್ಲಿ ಪ್ಲೇ ಆಫ್ ವರೆಗೂ ಪಂಜಾಬ್ ಕಿಂಗ್ಸ್ ತಂಡವನ್ನು ಕೊಂಡೊಯ್ಯುವಲ್ಲಿ ಕರ್ನಾಟಕದ ಮಯಾಂಕ್ ಅಗರ್ ವಾಲ್ ವಿಫಲವಾದ ಕಾರಣಕ್ಕೆ ಅವರನ್ನು ನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ನಾಯಕರಾದ ನಂತರ ಅಗರ್ ವಾಲ್ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದರು. ನಿರೀಕ್ಷಿತ ರನ್ ಗಳಿಸುವಲ್ಲಿ ತಂಡ ವಿಫಲ ಜೊತೆಗೆ ಮಯಾಂಕ್ ಅಗರ್ವಾಲ್ ಕೂಡಾ 16.33 ಸರಾಸರಿಯಲ್ಲಿ 196 ರನ್ ಗಳಿಗೆ ಕುಸಿದಿದ್ದರು. ಹೀಗಾಗಿ ಶಿಖರ್ ಧವನ್ ಅವರನ್ನು ನೂತನ ನಾಯಕನಾಗಿ ಪ್ರಾಂಚೈಸಿ ಆಯ್ಕೆ ಮಾಡಿದೆ.

ಐಪಿಎಲ್ ನಲ್ಲಿ ನಾಯಕ ಹಾಗೂ ಆಟಗಾರನಾಗಿ ಅನುಭವ ಹೊಂದಿರುವ ಶಿಖರ್ ಧವನ್, ಕಳೆದ ವರ್ಷದ ಮೊದಲ ಸೀಸ್ ನಲ್ಲಿ ತಂಡದ ಪರ ಉತ್ತಮ ಪ್ರದರ್ಶನ ತೋರಿದ್ದರು ಎಂದು ಐಪಿಎಲ್ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT