ಪಾಕಿಸ್ತಾನಕ್ಕೆ ಭರ್ಜರಿ ಜಯ 
ಕ್ರಿಕೆಟ್

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ ಜಯ; ಸೆಮೀಸ್ ಆಸೆ ಜೀವಂತ, ಭಾರತದ ವಿರುದ್ಧ ಜಿಂಬಾಬ್ವೆ ಗೆಲುವಿಗೆ ಪ್ರಾರ್ಥನೆ!

ಟಿ20 ವಿಶ್ವಕಪ್ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ ತಂಡ ದ.ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಸೆಮಿ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಸಿಡ್ನಿ: ಟಿ20 ವಿಶ್ವಕಪ್ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ ತಂಡ ದ.ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಸೆಮಿ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಹೌದು.. ಇಂದು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ 33 ರನ್ (ಡಕ್ವರ್ತ್ ಲೂಯಿಸ್ ನಿಯಮದನ್ವಯ) ಅಂತರದ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ತಂಡ ನಿಗದಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 185 ರನ್ ಗಳ ಸವಾಲಿನ ಮೊತ್ತ ಪೇರಿಸಿತ್ತು. ಪಾಕ್ ಪರ ಇಫ್ತಿಕಾರ್ ಅಹ್ಮದ್ (51) ಮತ್ತು ಶದಾಬ್ ಖಾನ್ (52) ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಸವಾಲಿನ ಮೊತ್ತಕ್ಕೆ ಕಾರಣರಾದರು. ಪಾಕಿಸ್ತಾನ ನೀಡಿದ 186 ರನ್ ಗಳನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾಗೆ ಮಳೆ ಅಡ್ಡಿಯಾಯಿತು. 

ಈ ವೇಳೆ ಫೀಲ್ಡ್ ಅಂಪೈರ್ ಗಳು ದಕ್ಷಿಣ ಆಫ್ರಿಕಾಗೆ ಗೆಲ್ಲಲು 14 ಓವರ್ ನಲ್ಲಿ 142 ರನ್ ಗಳ ಗುರಿ ನೀಡಿದರು. ಈ ಮೊತ್ತವನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 14 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 108ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ 33ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಈ ಸೋಲಿನ ಮೂಲಕ ದಕ್ಷಿಣ ಆಫ್ರಿಕಾ ಸೆಮೀಸ್ ಕನಸೂ ಅತಂತ್ರವಾಗಿದ್ದು, ಪಾಕಿಸ್ತಾನ ತಂಡದ ಸೆಮೀಸ್ ಆಸೆ ಜೀವಂತವಾದಂತಾಗಿದೆ.

ಈ ಗೆಲುವಿನೊಂದಿಗೆ ಪಾಕಿಸ್ತಾನ ನಾಲ್ಕು ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಐದು ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ ಸೆಮಿಸ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT