ಇಂಗ್ಲೆಂಡ್ ಹಾಗೂ ಲಂಕಾ ತಂಡಗಳು 
ಕ್ರಿಕೆಟ್

ಟಿ20 ವಿಶ್ವಕಪ್: ಲಂಕಾ ವಿರುದ್ಧ ಇಂಗ್ಲೆಂಡ್ ಗೆಲವು, ಸೆಮಿಫೈನಲ್‌ ಪ್ರವೇಶಿಸಿದ ಆಂಗ್ಲರು; ಆಸೀಸ್ ಮನೆಗೆ

ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ನಾಲ್ಕು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸುವ ಶನಿವಾರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಇದರ ಪರಿಣಾಮ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಟಿ20 ಟೂರ್ನಿಯಿಂದ ಹೊರಬಿದ್ದಿದೆ.

ಸಿಡ್ನಿ: ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ನಾಲ್ಕು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸುವ ಶನಿವಾರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶಿಸಿದೆ. ಇದರ ಪರಿಣಾಮ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಟಿ20 ಟೂರ್ನಿಯಿಂದ ಹೊರಬಿದ್ದಿದೆ.

ಇಂದು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಗ್ರೂಪ್ ಒಂದರ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತು. 

ಗೆಲುವಿಗೆ 142 ರನ್ ಗಳ ಗುರಿ ಬೆನ್ನತ್ತಿದ ಬೆನ್ ಸ್ಟೋಕ್ಸ್‌ ತಂಡ 19.4 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 144 ರನ್ ಗಳಿಸುವ ಮೂಲಕ ಗೆಲುವಿನ ದಡ ಸೇರಿತು.

ಸಮಯೋಚಿತ ಬ್ಯಾಟಿಂಗ್ ನಡೆಸಿದ ಬೆನ್ ಸ್ಟೋಕ್ಸ್‌  ಅಜೇಯ 42 ರನ್ ಬಾರಿಸಿ ಗೆಲುವಿನ ರೂವಾರಿ ಎನಿಸಿದರು. ಈ ಗೆಲುವಿನೊಂದಿಗೆ ಗ್ರೂಪ್ 1 ಹಂತದಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿವೆ.

ಶ್ರೀಲಂಕಾ ಪರ ವನಿಂದು ಹಸರಂಗಾ ಅವರು ಎರಡು ವಿಕೆಟ್ ಹಾಗೂ ಧನಂಜಯ ಡಿ ಸಿಲ್ವಾ ಅವರು ಎರಡು ವಿಕೆಟ್ ಪಡೆದು ಮಿಂಚಿದರು.

ಇಂಗ್ಲೆಂಡ್ ಪರ ಮಾರ್ಕ್ ವುಡ್ (3/26) ಮೂರು ವಿಕೆಟ್ ಪಡೆದರೆ, ಬೆನ್ ಸ್ಟೋಕ್ಸ್ (1/24), ಕ್ರಿಸ್ ವೋಕ್ಸ್ (1/24), ಸ್ಯಾಮ್ ಕರ್ರಾನ್ (1/27) ಮತ್ತು ಆದಿಲ್ ರಶೀದ್ (1/16) ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!