ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿಗೆ 34ನೇ ಹುಟ್ಟುಹಬ್ಬದ ಸಂಭ್ರಮ; ಮ್ಯಾಕ್ಸ್ ವೆಲ್, ದಹನಿ ಸೇರಿದಂತೆ ಹಲವರಿಂದ ಶುಭಾಶಯಗಳ ಮಹಾಪೂರ

ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿಗೆ ಇಂದು 34ನೇ ಹುಟ್ಟಹಬ್ಬದ ಅಂಗವಾಗಿ ಬೆಳಗ್ಗೆಯಿಂದಲೇ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ನವದೆಹಲಿ: ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿಗೆ ಇಂದು 34ನೇ ಹುಟ್ಟಹಬ್ಬದ ಅಂಗವಾಗಿ ಬೆಳಗ್ಗೆಯಿಂದಲೇ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್, ಪಾಕಿಸ್ತಾನದ ಶೆಹನ್ವಾಜ್ ದಹನಿ ಸೇರಿದಂತೆ ಹಲವು ಗಣ್ಯರು ವಿರಾಟ್ ಕೊಹ್ಲಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಗ್ಲೇನ್ ಮ್ಯಾಕ್ಸ್ ವೆಲ್ ಹಾಗೂ ದಹನಿ ನಿನ್ನೆಯೇ ವಿರಾಟ್ ಕೊಹ್ಲಿ ಅವರಿಗೆ ಟ್ವೀಟ್ ಮೂಲಕ ಜನ್ಮ ದಿನಕ್ಕೆ ಶುಭ ಕೋರಿದ್ದಾರೆ. ಕೊಹ್ಲಿ ಮತ್ತು ಮ್ಯಾಕ್ಸ್ ವೆಲ್ ಕಳೆದ ಎರಡು ಆವೃತ್ತಿಗಳಿಂದ ಆರ್ ಸಿಬಿ ತಂಡದಲ್ಲಿದ್ದಾರೆ. ಕ್ರಿಕೆಟ್ ನ್ನು ಸುಂದರವಾಗಿಸಿರುವ ಕೊಹ್ಲಿ ಸಹೋದರ ಸಂತೋಷವಾಗಿರು, ಜಗತ್ತನ್ನು ರಂಜಿಸು ಎಂದು ದಹನಿ ಟ್ವೀಟ್ ಮಾಡಿದ್ದಾರೆ. 

ಬಿಸಿಸಿಐ ಕೂಡಾ ವಿರಾಟ್ ಕೊಹ್ಲಿ ಜನ್ಮ ದಿನಕ್ಕೆ ಶುಭ ಹಾರೈಸಿದೆ. ಟಿ-20 ವಿಶ್ವಕಪ್ ನಲ್ಲಿ ಅದ್ಬುತ ಪ್ರದರ್ಶನ ತೋರುತ್ತಿರುವ ವಿರಾಟ್ ಕೊಹ್ಲಿ, ನಾಲ್ಕು ಪಂದ್ಯಗಳಲ್ಲಿ ಇಲ್ಲಿಯವರೆಗೂ 220 ರನ್ ಗಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ