ರೋಹಿತ್ ಶರ್ಮಾ 
ಕ್ರಿಕೆಟ್

ಟಿ20 ವಿಶ್ವಕಪ್: ಸೆಮಿಫೈನಲ್ ಸೋಲಿನ ಬೆನ್ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ರೋಹಿತ್ ಶರ್ಮಾ, ವಿಡಿಯೋ!

ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಇನ್ನು ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಂಡ ನಂತರ ಮೊದಲ ಐಸಿಸಿ ಟೂರ್ನಿಯ ಸೋಲು ಇದಾಗಿದ್ದು ರೋಹಿತ್ ಶರ್ಮಾ ಭಾವುಕರಾಗಿದ್ದಾರೆ.

ಬೆಂಗಳೂರು: ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಇನ್ನು ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಂಡ ನಂತರ ಮೊದಲ ಐಸಿಸಿ ಟೂರ್ನಿಯ ಸೋಲು ಇದಾಗಿದ್ದು ರೋಹಿತ್ ಶರ್ಮಾ ಭಾವುಕರಾಗಿದ್ದಾರೆ.

ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ಫ್ಲಾಪ್ ಶೋ, ವಿರಾಟ್ ಕೊಹ್ಲಿ ಅವರ ನಿಧಾನಗತಿಯ ಬ್ಯಾಟಿಂಗ್, ಈ ತಪ್ಪುಗಳಿಂದಾಗಿ ಭಾರತ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತಿದೆ. ಇನ್ನು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿರುವುದು ಆಟಗಾರರ ಸಾಮರ್ಥ್ಯಕ್ಕೆ ಕಪ್ಪು ಚುಕ್ಕೆಯಂತಾಗಿದೆ.

ನಾಯಕ ರೋಹಿತ್ ಕಣ್ಣಿಂದ ಕಣ್ಣೀರು ಸುರಿಯಿತು
ಈ ಸೋಲಿನ ನಂತರ ಭಾರತೀಯ ಅಭಿಮಾನಿಗಳು ಹಾಗೂ ರೋಹಿತ್ ಶರ್ಮಾ ತಮ್ಮ ಕಣ್ಣೀರನ್ನು ಮರೆಮಾಡಲು ಸಾಧ್ಯವಾಗಲಿಲ್ಲ. ಈ ಸೋಲಿನ ನಂತರ ರೋಹಿತ್ ಅಳಲು ಪ್ರಾರಂಭಿಸಿದರು. ರೋಹಿತ್ ಅಭಿಮಾನಿಗಳು ಈ ಕಣ್ಣೀರನ್ನು ನೋಡಿ ಮತ್ತಷ್ಟು ಭಾವುಕರಾದರು. ಆದರೆ ಕೆಲವರು ರೋಹಿತ್ ಕಣ್ಣೀರು ಸುಳ್ಳು ಎಂದು ಕಮೆಂಟ್ ಮಾಡಿದ್ದಾರೆ.

ರೋಹಿತ್ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ
ಅದೇ ಸಮಯದಲ್ಲಿ ಈಗ ಈ ಟೂರ್ನಿಯಲ್ಲಿ ಭಾರತ ನಿರ್ಗಮಿಸಿದ ನಂತರ, ರೋಹಿತ್ ನಾಯಕತ್ವದ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿವೆ. ಇದಕ್ಕೆ ಕಾರಣ ಕೆಲವು ತಪ್ಪು ನಿರ್ಧಾರಗಳು. ಇದರಲ್ಲಿ ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಪಂತ್ ಅವರನ್ನು ಆಯ್ಕೆ ಮಾಡಿದ್ದು ಅಲ್ಲದೆ ಅಕ್ಷರ್ ಪಟೇಲ್ ಅವರ ಕಳಪೆ ಪ್ರದರ್ಶನದ ಹೊರತಾಗಿಯೂ ಚಹಾಲ್ ರನ್ನು ತಂಡಕ್ಕೆ ಸೇರಿಸಿಕೊಳ್ಳದಿರುವುದು.

ಇಂಗ್ಲೆಂಡ್ ಗೆಲುವಿನ ನಂತರ ಇದೀಗ ನವೆಂಬರ್ 13ರಂದು ಮೆಲ್ಬೋರ್ನ್‌ನಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT