ಟಿ-20 ಕ್ರಿಕೆಟ್ ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ವಿರಾಟ್ ಕೊಹ್ಲಿ!
ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಟಿ-20 ಕ್ರಿಕೆಟ್ ನಲ್ಲಿ 4,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಆಡಿಲೇಡ್: ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಟಿ-20 ಕ್ರಿಕೆಟ್ ನಲ್ಲಿ 4,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದರು.
ಇದನ್ನೂ ಓದಿ: ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್: ಕೊಹ್ಲಿ, ಪಾಂಡ್ಯ ಅದ್ಭುತ ಬ್ಯಾಟಿಂಗ್; ಇಂಗ್ಲೆಂಡ್'ಗೆ 169 ರನ್ ಗುರಿ!
ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸುವವರಲ್ಲಿ 34 ವರ್ಷದ ವಿರಾಟ್ ಕೊಹ್ಲಿ ಈಗಾಗಲೇ ಅಗ್ರಸ್ಥಾನದಲ್ಲಿದ್ದಾರೆ. ಟಿ-20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಬ್ಯಾಟ್ಸ್ ಮನ್ ಗಳಲ್ಲಿಯೂ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. 115ನೇ ಗೇಮ್ ನಲ್ಲಿ ಕೊಹ್ಲಿ ಈ ಮೈಲುಗಲ್ಲು ಸಾಧಿಸಿದರು.
ಟಿ-20 ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಇವರ ನೆರವಿನಿಂದಲೇ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.