ಕ್ರಿಕೆಟ್

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಮಹತ್ವದ ಪಂದ್ಯ!

Srinivasamurthy VN

ಹ್ಯಾಮಿಲ್ಟನ್: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತಕ್ಕೆ ಬ್ಯಾಟಿಂಗ್ಅವಕಾಶ ನೀಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಟಾಸ್ ಸೋತಿರುವ ಭಾರತ ತಂಡ ಬ್ಯಾಟಿಂಗ್ ಆರಂಭಿಸಿದೆ. ಈಗಾಗಲೇ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿರುವ ಭಾರತಕ್ಕೆ ಟೂರ್ನಿಯಲ್ಲಿ ಕಮ್ ಬ್ಯಾಕ್ ಮಾಡಲು ಈ ಪಂದ್ಯ ಮಹತ್ವದ್ದಾಗಿದ್ದು ಶತಾಯಗತಾಯ ಗೆಲ್ಲಲೇ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಹೊರತಾಗಿಯೂ ಭಾರತ ತಂಡ ಕಳಪೆ ಬೌಲಿಂಗ್ ನಿಂದಾಗಿ ಪಂದ್ಯ ಕೈಚೆಲ್ಲಿತ್ತು. ಈ ಬಾರಿಯೂ ನ್ಯೂಜಿಲೆಂಡ್ ರನ್ ಚೇಸಿಂಗ್ ಮೊರೆ ಹೋಗಿದ್ದು, ಭಾರತೀಯ ಬೌಲರ್ ಗಳಿಗೆ ಈ ಪಂದ್ಯ ಅಗ್ನಿ ಪರೀಕ್ಷೆಯಾಗಿರಲಿದೆ.

ಇನ್ನು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಒಂದು ಪಂದ್ಯ ಸೋತಿರುವುದರಿಂದ ಈ ಪಂದ್ಯವನ್ನು ಗೆದ್ದು ಸರಣಿ ಸಮಬಲ ಮಾಡಿಕೊಳ್ಳುವುದು ಟೀಂ ಇಂಡಿಯಾ ಗುರಿಯಾಗಿದೆ. ಅಂತೆಯೇ ಮೊದಲ ಪಂದ್ಯದಂತೆಯೇ 2ನೇ ಪಂದ್ಯವನ್ನೂ ಗೆದ್ದು ಸರಣಿ ಕೈ ವಶ ಮಾಡಿಕೊಳ್ಳಲು ಕಿವೀಸ್ ಪಡೆ ತವಕಿಸುತ್ತಿದೆ.

ಇದನ್ನೂ ಓದಿ: 

ತಂಡಗಳು:
ಭಾರತ:
ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
 

SCROLL FOR NEXT