ಕ್ರಿಕೆಟ್

2ನೇ ಟಿ20: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ವಿರೋಚಿತ ಜಯ, ಸರಣಿ ಕೈವಶ

Srinivasamurthy VN

ಗುವಾಹತಿ: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 16 ರನ್ ಗಳ ಅಂತರದ ವಿರೋಚಿತ ಜಯ ಗಳಿಸಿದ್ದು, ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕೈ ವಶ ಮಾಡಿಕೊಂಡಿದೆ.

ಗುವಾಹತಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ 238 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ ಕ್ವಿಂಟನ್ ಡಿ ಕಾಕ್ ಮತ್ತು ಡೇವಿಡ್ ಮಿಲ್ಲರ್ ಅಮೋಘ ಬ್ಯಾಟಿಂಗ್ ನ ಹೊರತಾಗಿಯೂ ನಿಗದಿತ 20 ಓವರ್ ಗಳಲ್ಲಿ 221 ರನ್ ಗಳಿಸಿ 16 ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿತು.

ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ಎದುರಿಸಿತು. ನಾಯಕ ಬವುಮಾ ಮತ್ತು ರೊಸ್ಸೋ ಶೂನ್ಯಕ್ಕೆ ಔಟಾಗಿದ್ದು ಆಫ್ರಿಕಾ ತಂಡಕ್ಕೆ ಭಾರಿ ಆಘಾತ ನೀಡಿತು. ಆದರೆ ಈ ಹಂತದಲ್ಲಿ ಜೊತೆಯಾದ ಕ್ವಿಂಟನ್ ಡಿಕಾಕ್ ಮತ್ತು ಮರ್ಕ್ರಾಮ್ ಜೋಡಿ ಆರಂಭಿಕ ಆಘಾತದಿಂದ ತಂಡವನ್ನು ಹೊರತಂದಿತು. ಮರ್ಕ್ರಾಮ್ 33 ರನ್ ಗಳಿಸಿ ಅಕ್ಸರ್ ಪಟೇಲ್ ಬೌಲಿಂಗ್ ನಲ್ಲಿ ಔಟಾದರು. 

ಬಳಿಕ ಡಿಕಾಕ್ ಜೊತೆಗೂಡಿದ ಡೇವಿಡ್ ಮಿಲ್ಲರ್ ಅಕ್ಷರಶಃ ಭಾರತೀಯ ಬೌಲರ್ ಗಳ ಮೇಲೆ ಸವಾರಿ ಮಾಡಿದರು. ಮುರಿಯದ ನಾಲ್ಕನೇ ವಿಕೆಟ್ ಗೆ ಈ ಜೋಡಿ ಶತಕದ ಜೊತೆಯಾಟವಾಡಿತು. 19ನೇ  ಓವರ್ ನಲ್ಲಿ 26 ರನ್ ಗಳಿ ಆಫ್ರಿಕಾ ಪಾಳಯದಲ್ಲಿ ಗೆಲುವಿನ ಆಸೆ ಚಿಗುರಿಸಿತು. ಆದರೆ ಅಂತಿಮ ಓವರ್ ನಲ್ಲಿ ಗೆಲ್ಲಲು 37 ರನ್ ಗಳ ಅವಶ್ಯಕತೆ ಇತ್ತು. ಈ ವೇಳೆ ಈ ಜೋಡಿ 20 ರನ್ ಗಳಿಸಿ 16 ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿತು.
 

SCROLL FOR NEXT