ದಿನೇಶ್ ಕಾರ್ತಿಕ್ 
ಕ್ರಿಕೆಟ್

3ನೇ ಟಿ20: ವಿಶ್ವ ದಾಖಲೆ ನಿರ್ಮಿಸಿದ ಭಾರತದ ದಿನೇಶ್ ಕಾರ್ತಿಕ್

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಹರಿಣಗಳು ನೀಡಿದ್ದ 228ರನ್ ಗಳ ಬೃಹತ್ ಗುರಿಯನ್ನು ಬೆನ್ನ ಹತ್ತಿದ್ದ ಟೀಂ ಇಂಡಿಯಾಗೆ ತಮ್ಮ ಸ್ಪೋಟಕ ಆಟದ ಮೂಲಕ ನೆರವು ನೀಡಿದ್ದ ದಿನೇಶ್ ಕಾರ್ತಿಕ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇಂದೋರ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಹರಿಣಗಳು ನೀಡಿದ್ದ 228ರನ್ ಗಳ ಬೃಹತ್ ಗುರಿಯನ್ನು ಬೆನ್ನ ಹತ್ತಿದ್ದ ಟೀಂ ಇಂಡಿಯಾಗೆ ತಮ್ಮ ಸ್ಪೋಟಕ ಆಟದ ಮೂಲಕ ನೆರವು ನೀಡಿದ್ದ ದಿನೇಶ್ ಕಾರ್ತಿಕ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಹೌದು.. ಇಂದೋರ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ದಿನೇಶ್ ಕಾರ್ತಿಕ್ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದರು. ಸೌತ್ ಆಫ್ರಿಕಾ ನೀಡಿದ 228 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾದರೆ, ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (1) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ದಿನೇಶ್ ಕಾರ್ತಿಕ್ 4 ಸಿಕ್ಸರ್ ಹಾಗೂ 4 ಬೌಂಡರಿ ಸಿಡಿಸಿದರು. ಅಲ್ಲದೆ ಕೇವಲ 20 ಎಸೆತಗಳಲ್ಲಿ 219 ರ ಸ್ಟ್ರೈಕ್​ ರೇಟ್​ನಲ್ಲಿ 46 ರನ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಆದರೆ ಈ ವೇಳೆ ಸ್ವಿಚ್​ ಹಿಟ್​ ಬಾರಿಸುವ ಯತ್ನದಲ್ಲಿ ಬೌಲ್ಡ್ ಆಗಿ ಹೊರನಡೆಯಬೇಕಾಯಿತು.

ಈ ಸ್ಪೋಟಕ ಇನಿಂಗ್ಸ್​ ಮೂಲಕ ಟಿ20 ಕ್ರಿಕೆಟ್​ನಲ್ಲಿ ದಿನೇಶ್ ಕಾರ್ತಿಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 200 ಕ್ಕೂ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಅತೀ ಹಿರಿಯ ಆಟಗಾರ ಎಂಬ ದಾಖಲೆಗೆ ದಿನೇಶ್ ಕಾರ್ತಿಕ್ ಭಾಜನರಾಗಿದ್ದಾರೆ. ಈ ಹಿಂದೆ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು. ಜಯಸೂರ್ಯ ತಮ್ಮ 37ನೇ ವಯಸ್ಸಿನಲ್ಲಿ 2 ಬಾರಿ 200ರ ಸ್ಟ್ರೈಕ್ ರೇಟ್​ನಲ್ಲಿ 30ಕ್ಕೂ ಹೆಚ್ಚು ರನ್​ ಬಾರಿಸಿದ್ದರು.

ಇದೀಗ ದಿನೇಶ್ ಕಾರ್ತಿಕ್ ತಮ್ಮ 37ನೇ ವಯಸ್ಸಿನಲ್ಲಿ 3 ಬಾರಿ 200 ಕ್ಕಿಂತಲೂ ಹೆಚ್ಚಿನ ಸ್ಟ್ರೈಕ್ ರೇಟ್​ 30ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಸ್ಟ್ರೈಕ್ ರೇಟ್​ ಮೂಲಕ ಅಬ್ಬರಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ವಿಶೇಷ ವಿಶ್ವ ದಾಖಲೆಯನ್ನು ದಿನೇಶ್ ಕಾರ್ತಿಕ್ ತಮ್ಮದಾಗಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಸಿದ್ದರಾಮಯ್ಯ ಮಾಹಿತಿ; ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT