ಭಾರತ vs ದಕ್ಷಿಣ ಆಫ್ರಿಕಾ 
ಕ್ರಿಕೆಟ್

ಮೊದಲ ಏಕದಿನ: ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟ, ಭಾರತಕ್ಕೆ 250ರನ್ ಗಳ ಬೃಹತ್ ಗುರಿ ನೀಡಿದ ದ.ಆಫ್ರಿಕಾ

ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾಗೆ ಗೆಲ್ಲಲು 250ರನ್ ಗಳ ಬೃಹತ್ ಗುರಿ ನೀಡಿದೆ.

ಲಖನೌ: ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಮಿಲ್ಲರ್-ಕ್ಲಾಸನ್ ಶತಕದ ಜೊತೆಯಾಟದ ನೆರವಿನಿಂದ ಟೀಂ ಇಂಡಿಯಾಗೆ ಗೆಲ್ಲಲು 250ರನ್ ಗಳ ಬೃಹತ್ ಗುರಿ ನೀಡಿದೆ.

ಆತಿಥೇಯ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನಿಗದಿತ 40 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು 249 ರನ್ ಗಳಿಸಿದೆ. ಆ ಮೂಲಕ ಭಾರತಕ್ಕೆ ಗೆಲ್ಲಲು 250ರನ್ ಗಳ ಗುರಿ ನೀಡಿದೆ. 

ಉತ್ತರ ಪ್ರದೇಶದ ಲಖನೌನ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಎಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ಶಿಖರ್‌ ಧವನ್‌ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮಳೆಯಿಂದಾಗಿ ಪಂದ್ಯವನ್ನು 40 ಓವರ್‌ಗೆ ಇಳಿಸಲಾಗಿತ್ತು. ಅದರಂತೆ ಬ್ಯಾಟಿಂಗ್ ಆರಂಭಿಸಿದ ಪ್ರವಾಸಿ ಪಡೆಗೆ ಜೇನ್ಮೆನ್ ಮಲಾನ್ (22) ಹಾಗೂ ಕ್ವಿಂಟನ್ ಡಿಕಾಕ್ (48) ಉತ್ತಮ ಆರಂಭ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 49 ರನ್ ಜೊತೆಯಾಟ ನೀಡಿದರು.

ಮಲಾನ್ (22) ಔಟಾದ ಬಳಿಕ ಬಂದ ನಾಯಕ ತೆಂಬಾ ಬವುಮಾ (8) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಏಡನ್ ಮರ್ಕರಂ ಸಹ ಶೂನ್ಯ ಸುತ್ತಿ ನಿರಾಶೆ ಮೂಡಿಸಿದರು. ಈ ಹಂತದಲ್ಲಿ ಕ್ವಿಂಟನ್‌ಗೆ (48) ಜೊತೆಯಾದ ಹೆನ್ರಿಚ್‌ ಕ್ಲಾಸನ್‌ ವಿಕೆಟ್‌ ಬೀಳದಂತೆ ಎಚ್ಚರಿಕೆಯ ಆಟವಾಡಿದರು. ಕ್ವಿಂಟನ್‌ ಡಿ ಕಾಕ್ ವಿಕೆಟ್‌ ಪತನದ ನಂತರ ಬಂದ ಡೇವಿಡ್‌ ಮಿಲ್ಲರ್‌ ಆಫ್ರಿಕಾ ಇನಿಂಗ್ಸ್‌ಗೆ ಬಲ ತುಂಬಿದರು. ಕ್ಲಾಸನ್‌ ಜೊತೆಗೂಡಿ ಮುರಿಯದ ಐದನೇ ವಿಕೆಟ್‌ ಪಾಲುದಾರಿಕೆಯಲ್ಲಿ 139 ರನ್‌ ಸೇರಿದರು.

ಕ್ಲಾಸನ್‌ 65 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿ ಸಹಿತ 74 ರನ್ ಗಳಿಸಿದರೆ, ಮಿಲ್ಲರ್‌ 63 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 5 ಬೌಂಡರಿ ಸಹಿತ 75 ರನ್ ಸಿಡಿಸಿದರು.  ಭಾರತ ಪರ ಶಾರ್ದೂಲ್‌ ಠಾಕೂರ್‌ 2 ವಿಕೆಟ್‌ ಕಿತ್ತರು. ಸ್ಪಿನ್ನರ್‌ಗಳಾದ ಕುಲದೀಪ್‌ ಯಾದವ್‌ ಮತ್ತು ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಹಂಚಿಕೊಂಡರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT