ಮೊಹಮ್ಮದ್ ಶಮಿ 
ಕ್ರಿಕೆಟ್

ಐಸಿಸಿ ಪುರುಷರ ಟಿ-20 ವಿಶ್ವಕಪ್: ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿಗೆ ಸ್ಥಾನ

ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಿಲ ಭಾರತ ಹಿರಿಯ ಆಯ್ಕೆದಾರರ ಸಮಿತಿ ಆಯ್ಕೆ ಮಾಡಿರುವುದಾಗಿ ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ನವದೆಹಲಿ: ಐಸಿಸಿ ಪುರುಷರ ಟಿ-20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಿಲ ಭಾರತ ಹಿರಿಯ ಆಯ್ಕೆದಾರರ ಸಮಿತಿ ಆಯ್ಕೆ ಮಾಡಿರುವುದಾಗಿ ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿ ಪುರುಷರ ಟಿ-20 ವಿಶ್ವಕಪ್ ಗೆ 15 ಮಂದಿ ಆಟಗಾರರನ್ನೊಳಗೊಂಡ ಭಾರತ ತಂಡದಲ್ಲಿ ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರಿಗೆ ಸ್ಥಾನ ಒದಗಿಸಲಾಗಿದೆ ಎಂದು ಬಿಸಿಸಿಐ ಶುಕ್ರವಾರ ಖಚಿತಪಡಿಸಿದೆ. ಜಸ್ಪ್ರೀತ್ ಬೂಮ್ರಾ ಗಾಯಗೊಂಡಿರುವುದರಿಂದ ರೋಹಿತ್ ಶರ್ಮಾ ನೇತೃತ್ವದಲ್ಲಿ 14 ಆಟಗಾರರನ್ನೊಳಗೊಂಡ ತಂಡ ವಿಶ್ವಕಪ್ ಗಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದೆ.

ಬೂಮ್ರಾ ಬದಲಿ ಆಟಗಾರರಾಗಿ ಮೊಹಮ್ಮದ್ ಸಿರಾಜ್ ಮತ್ತು ದೀಪಕ್ ಚಹರ್ ಮುಂಚೂಣಿಯಲ್ಲಿದ್ದರು. ಆದಾಗ್ಯೂ, ಅಂತಿಮವಾಗಿ ಐಸಿಸಿಐ ಗಡುವು ಮುಗಿಯುವುದರೊಳಗೆ ಶಮಿ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

ಈ ಕುರಿತು ಬಿಸಿಸಿಐ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದ್ದು, ಮೊಹಮ್ಮದ್ ಶಮಿ ಆಸ್ಟ್ರೇಲಿಯಾಕ್ಕೆ ತೆರಳಲಿದ್ದು, ಟೀ ಇಂಡಿಯಾ ಸೇರಲಿದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಬ್ಯಾಕ್ ಆಪ್ ಆಟಗಾರರಾಗಿ ಶೀಘ್ರದಲ್ಲೇ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿದೆ. 

ಟೀಂ ಇಂಡಿಯಾ ಇಂತಿದೆ:  ರೋಹಿತ್ ಶರ್ಮಾ( ನಾಯಕ) ಕೆಎಲ್ ರಾಹುಲ್ ( ಉಪ ನಾಯಕ) ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್) ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್) ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅಶ್ರದೀಪ್ ಸಿಂಗ್, ಮೊಹಮ್ಮದ್ ಶಮಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT