ಬಿಸಿಸಿಐ ನೂತನ ಅಧ್ಯಕ್ಷರಾಗಿ ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ, ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ.
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ.
ರೋಜರ್ ಬಿನ್ನಿ ಭಾರತ ತಂಡದ ಮಾಜಿ ಆಟಗಾರರೂ ಆಗಿದ್ದು 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರೂ ಆಗಿದ್ದಾರೆ.
ಸೌರವ್ ಗಂಗೂಲಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ನ 36 ನೇ ಅಧ್ಯಕ್ಷರಾಗಿ ಬಿನ್ನಿ ನೇಮಕಗೊಂಡಿದ್ದಾರೆ. ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿಯಾಗಿದ್ದರು.
ಇದನ್ನೂ ಓದಿ: ಬಿಸಿಸಿಐ ನೂತನ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ ಸಾಧ್ಯತೆ, ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ
ಇನ್ನು ಬಿಸಿಸಿಐ ನ ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಯಲಿದ್ದಾರೆ. 1955 ಜುಲೈ 19ರಂದು ಜನಿಸಿದ ರೋಜರ್ ಬಿನ್ನಿ 1979ರಿಂದ 1987ರವರೆಗೆ ಭಾರತ ಕ್ರಿಕೆಟ್ ತಂಡದಲ್ಲಿದ್ದರು. ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.