ವಿರಾಟ್ ಕೊಹ್ಲಿ 
ಕ್ರಿಕೆಟ್

ಟಿ-20 ವಿಶ್ವಕಪ್: ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ಪಾಕಿಸ್ತಾನ ವಿರುದ್ಧ ಭಾನುವಾರ ನಡೆದ ಸೂಪರ್ ಲೀಗ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಗೆಲುವಿಗೆ ನೆರವಾದ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆರನೇ ಆಟಗಾರರಾಗಿದ್ದಾರೆ.

ಮೆಲ್ಬರ್ನ್: ಪಾಕಿಸ್ತಾನ ವಿರುದ್ಧ ಭಾನುವಾರ ನಡೆದ ಸೂಪರ್ ಲೀಗ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಟೀಂ ಇಂಡಿಯಾ ಗೆಲುವಿಗೆ ನೆರವಾದ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆರನೇ ಆಟಗಾರರಾಗಿದ್ದಾರೆ.

ವಿರಾಟ್ ಕೊಹ್ಲಿ 528 ಪಂದ್ಯಗಳಲ್ಲಿ 53.80 ಸರಾಸರಿಯಲ್ಲಿ 24,212 ರನ್ ಗಳಿಸಿದ್ದಾರೆ. ಈ ಪೈಕಿ 71 ಶತಕ, 126 ಅರ್ಧ ಶತಕ ಸಿಡಿಸಿದ್ದಾರೆ. ಅತಿ ಹೆಚ್ಚು ಎಂದರೆ 254 ರನ್ ಬಾರಿಸಿದ್ದಾರೆ. 

ಮತ್ತೊಂದೆಡೆ ರಾಹುಲ್ ದ್ರಾವಿಡ್  ಇದೀಗ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. 509 ಪಂದ್ಯಗಳಲ್ಲಿ ಡ್ರಾವಿಡ್ 45. 41ರಲ್ಲಿ ಸರಾಸರಿಯಲ್ಲಿ 24,208 ರನ್ ಗಳಿಸಿದ್ದಾರೆ. ಈ ಪೈಕಿ 48 ಶತಕ ಮತ್ತು 146 ಅರ್ಧ ಶತಕ ಗಳು ಸೇರಿವೆ. ವೈಯಕ್ತಿಕವಾಗಿ ಅತಿ ಹೆಚ್ಚು 270 ರನ್ ಗಳಿಸಿದ್ದಾರೆ. 

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರರ ಪೈಕಿ ಸಚಿನ್ ತೆಂಡೊಲ್ಕರ್ 34,357 ರನ್ ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಶ್ರೀಲಂಕಾದ ಬ್ಯಾಟರ್ ಕುಮಾರ್ ಸಂಗಕ್ಕಾರ 28,016 ರನ್ ಗಳೊಂದಿಗೆ ಎರಡನೇ ಸ್ಥಾನ, ರಿಕಿ ಪಾಂಟಿಂಗ್ ಮೂರನೇ ಸ್ಥಾನ (27,483)  ಮಹೇಲಾ ಜಯವರ್ಧನೆ ನಾಲ್ಕು (25,957)  ಮತ್ತು ಜಾಕ್ವೆಸ್ ಕಾಲಿಸ್  (25,534) ಐದನೇ ಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel