ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್: ಲಂಕಾ ವಿರುದ್ಧ ಆಸ್ಟ್ರೇಲಿಯಾ 7 ವಿಕೆಟ್ ಗಳ ಭರ್ಜರಿ ಜಯ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 7 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

ಆಸ್ಟ್ರೇಲಿಯಾ ತಂಡ
Vishwanath S
Updated On : 25 Oct 2022, 9:30 pm

ಪರ್ತ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 7 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. 

ಪರ್ತ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಂಕಾ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಬಾರಿಸಿತ್ತು. ಲಂಕಾ ನೀಡಿದ 158 ರನ್ ಗಳ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನು 21 ಎಸೆತ ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 158 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. 

ಲಂಕಾ ಪರ ನಿಸಾಂಕಾ 40, ಧನಂಜಯ ಡಿಸಿಲ್ವಾ 26, ಅಸ್ಲಾಂಕಾ ಅಜೇಯ 38 ರನ್ ಬಾರಿಸಿದ್ದಾರೆ. 

Advertisement

Advertisement

ಇನ್ನು ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 11, ಅರೋನ್ ಫಿಂಚ್ 31, ಮಾರ್ಷ್ 18, ಗ್ಲೇನ್ ಮ್ಯಾಕ್ಸ್ ವೆಲ್ 23 ಹಾಗೂ ಸ್ಟೋಯ್ನಿಸ್ ಅಜೇಯ 59 ರನ್ ಬಾರಿಸಿದ್ದಾರೆ. 

ಐಸಿಸಿ ಟಿ20 ವಿಶ್ವಕಪ್ ನ ಗ್ರೂಪ್ 1 ಪಟ್ಟಿಯಲ್ಲಿ ಒಂದು ಪಂದ್ಯ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ನಾಲ್ಕನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement