ಏಷ್ಯಾ ಕಪ್ 2022: ಕೊಹ್ಲಿ ಅರ್ಧಶತಕ, ಪಾಕ್ ಗೆ 182 ರನ್ ರನ್ ಗುರಿ
ಭಾರತ- ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕ್ ಭಾರತ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 181 ರನ್ ಗಳಿಗೆ ಕಟ್ಟಿಹಾಕಿತು.
ದುಬೈ: ಭಾರತ- ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕ್ ಭಾರತ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 181 ರನ್ ಗಳಿಗೆ ಕಟ್ಟಿಹಾಕಿತು.
ಭಾರತದ ಆರಂಭಿಕ ಆಟಗಾರರಾದ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮ, ಸಾಧಾರಣ ಆರಂಭ ನೀಡಿದರು. ನಂತರ ಬಂದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 60 ರನ್ ಗಳಿಸಿ ಭಾರತಕ್ಕೆ ಹೆಚ್ಚಿನ ರನ್ ಗಳಿಸಲು ನೆರವಾದರು.
ಇದನ್ನೂ ಓದಿ: ಏಷ್ಯಾ ಕಪ್ 2022: ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕ್
ಆದರೆ ಸೂರ್ಯಕುಮಾರ್ ಯಾದವ್ ಸೇರಿದಂತೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಪಾಕ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. ಪರಿಣಾಮ, ನಿಗದಿತ 20 ಓವರ್ ಗಳಲ್ಲಿ ಭಾರತ ತಂಡ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.