ಟೀಂ ಇಂಡಿಯಾ 
ಕ್ರಿಕೆಟ್

ಟೀಂ ಇಂಡಿಯಾದ ಹೊಸ ಜೆರ್ಸಿ ಅನಾವರಣ: ಹೇಗಿದೆ ನೋಡಿ!

ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

ಒಂದು ತಿಂಗಳ ಅವಧಿಯಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್‌ ನಡೆಯಲಿದೆ. ಬಿಸಿಸಿಐ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್‌ನಲ್ಲಿ ಹೊಸ ಜೆರ್ಸಿ ಕಿಟ್ ಅನ್ನು ಬಿಡುಗಡೆ ಮಾಡಿದೆ.

ಫೋಟೋದಲ್ಲಿ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಮತ್ತು ಮಹಿಳಾ ತಂಡದ ಹರ್ಮನ್‌ಪ್ರೀತ್ ಕೌರ್, ಶೆಫಾಲಿ ವರ್ಮಾ ಮತ್ತು ರೇಣುಕಾ ಸಿಂಗ್ ಹೊಸ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಹೊಸ ಜೆರ್ಸಿಯು ಡ್ಯುಯಲ್ ಟೋನ್ ಆಗಿದ್ದು, ಭುಜಗಳು ಮತ್ತು ತೋಳುಗಳಲ್ಲಿ ಗಾಢ ನೀಲಿ ಮತ್ತು ಬೇರೆಡೆ ತಿಳಿ ನೀಲಿ ಛಾಯೆಯಲ್ಲಿರುತ್ತದೆ. ಜೆರ್ಸಿಯ ಎಡಭಾಗದಲ್ಲಿ ಸಣ್ಣ ವಿನ್ಯಾಸವಿದೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಟ್ವೀಟ್‌ನಲ್ಲಿ, ದೇಶದ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಜೆರ್ಸಿ ಅನ್ನು ಸಮರ್ಪಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ