ಸೂರ್ಯಕುಮಾರ್-ವಿರಾಟ್ ಕೊಹ್ಲಿ 
ಕ್ರಿಕೆಟ್

3ನೇ ಟಿ20 ಪಂದ್ಯ: ಸೂರ್ಯಕುಮಾರ್ ಸ್ಫೋಟಕ ಬ್ಯಾಟಿಂಗ್; ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಗೆಲುವು, ಸರಣಿ ಕೈವಶ!

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.

ಹೈದರಾಬಾದ್: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. 

ಹೈದರಾಬಾದ್ ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್ ಪೇರಿಸಿತ್ತು. ಆಸ್ಟ್ರೇಲಿಯಾ ನೀಡಿದ 187 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಇನ್ನು ಒಂದು ಎಸೆತ ಬಾಕಿ ಇರುವಂತೆ 187 ರನ್ ಪೇರಿಸಿ ಗೆಲುವಿನ ನಗೆ ಬೀರಿತು. 

ಆಸ್ಟ್ರೇಲಿಯಾ ಪರ ಕ್ಯಾಮರೂನ್ ಗ್ರೀನ್ 52, ಆರೋನ್ ಪಿಂಚ್ 7, ಸ್ಟೀವನ್ ಸ್ಮಿತ್ 9, ಗ್ಲೇನ್ ಮ್ಯಾಕ್ಸ್ ವೇಲ್ 6, ಜೋಶ್ ಇಂಗ್ಲಿಸ್ 24, ಟೀಮ್ ಡೇವಿಡ್ 54 ಪೇರಿಸಿದ್ದಾರೆ. ಇನ್ನು ಭಾರತ ಪರ ಬೌಲಿಂಗ್ ನಲ್ಲಿ ಅಕ್ಷರ್ ಪಟೇಲ್ 3, ಭುವನೇಶ್ವರ್ ಕುಮಾರ್, ಚಹಾಲ್ ಮತ್ತು ಹರ್ಷಲ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.

ಭಾರತ ಪರ ಕೆಎಲ್ ರಾಹುಲ್ 1, ರೋಹಿತ್ ಶರ್ಮಾ 17, ವಿರಾಟ್ ಕೊಹ್ಲಿ 63, ಸೂರ್ಯಕುಮಾರ್ ಯಾದವ್ 69, ಹಾರ್ದಿಕ್ ಪಾಂಡ್ಯ ಅಜೇಯ 25 ರನ್ ಪೇರಿಸಿದ್ದಾರೆ. 

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT