ರೋಹಿತ್ ಶರ್ಮಾ, ಆರನ್ ಫಿಂಚ್ 
ಕ್ರಿಕೆಟ್

ಆಸೀಸ್ ವಿರುದ್ಧದ ಮೂರನೇ ಟಿ-20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ

ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಹೈದರಾಬಾದ್: ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದಿನ ಪಂದ್ಯದಲ್ಲಿ ವೇಗಿ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾಗೆ ಮರಳಿದ್ದಾರೆ. ಆದರೆ, ರಿಷಭ್ ಪಂತ್ ಪಂದ್ಯದಿಂದ ಹೊರಗೆ ಉಳಿದಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಸೀನ್ ಅಬಾಟ್ ಬದಲಿಗೆ ಜೋಶ್ ಇಂಗ್ಲಿಸ್ ಅವರನ್ನು ಕರೆ ತರಲಾಗಿದೆ.  ಮೊಹಾಲಿಯಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಸೋತಿದ್ದ ಭಾರತ, ನಾಗಪುರದಲ್ಲಿ ಶುಕ್ರವಾರ ನಡೆದ ಎಂಟು ಓವರ್ ಗಳ ಪಂದ್ಯ ಗೆದ್ದು ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಂಡಿತ್ತು. ಇಂದಿನ ಪಂದ್ಯ ಗೆದ್ದು ಸರಣಿ ಗೆಲ್ಲುವತ್ತ ಟೀಂ ಇಂಡಿಯಾ ಗಮನ ಹರಿಸಿದೆ.

ಟೀಂ ಇಂಡಿಯಾ ಇಂತಿದೆ:  ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ) ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್

ಆಸ್ಟ್ರೇಲಿಯಾ ತಂಡ ಇಂತಿದೆ:  ಆರನ್ ಫಿಂಚ್(ನಾಯಕ) ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್,  ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT