ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ವಿಶ್ವ ಪ್ರವಾಸೋದ್ಯಮ ದಿನದಂದು ಸಚಿನ್ ತೆಂಡೂಲ್ಕರ್ ಟ್ರಾವೆಲ್ ಡೈರಿ; ವಿಡಿಯೋ ನೋಡಿ

ವಿಶ್ವ ಪ್ರವಾಸೋದ್ಯಮ ದಿನದ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪ್ರವಾಸದ ದಿನಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ಕೆಲವು ಪ್ರವಾಸಿ ತಾಣಗಳಿಗೆ ಪ್ರಯಾಣಿಸುವ ಸಣ್ಣ ತುಣುಕುಗಳನ್ನು ತೋರಿಸುವ...

ಮುಂಬೈ: ವಿಶ್ವ ಪ್ರವಾಸೋದ್ಯಮ ದಿನದ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ತಮ್ಮ ಪ್ರವಾಸದ ದಿನಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ಕೆಲವು ಪ್ರವಾಸಿ ತಾಣಗಳಿಗೆ ಪ್ರಯಾಣಿಸುವ ಸಣ್ಣ ತುಣುಕುಗಳನ್ನು ತೋರಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. 

ಸಚಿನ್ ಅವರು ಸಮುದ್ರತೀರದಲ್ಲಿ ಪ್ಯಾರಾಸೈಲಿಂಗ್ ಮಾಡುತ್ತಿರುವುದು, ಸುಂದರವಾದ ಪರ್ವತ ರಸ್ತೆಯಲ್ಲಿ ಲಾಂಗ್ ಡ್ರೈವ್ ಹೋಗುವುದು, ಉದ್ಯಾನದಲ್ಲಿ ಸೈಕ್ಲಿಂಗ್ ಮಾಡುವುದು ಮತ್ತು ಸಮುದ್ರ ತೀರದಲ್ಲಿ ಅಲೆದಾಡುವ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರನ್ನು ವಿಶ್ವದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಎರಡು ದಶಕಗಳ ಕಾಲ ವೃತ್ತಿಜೀವನದಲ್ಲಿ ತನ್ನ ಅಪಾರ ದಾಖಲೆಗಳೊಂದಿಗೆ ಕ್ರೀಡೆಗೆ ಲೆಕ್ಕವಿಲ್ಲದಷ್ಟು ಕೊಡುಗೆಗಳನ್ನು ನೀಡಿದ್ದಾರೆ. 2013 ರಲ್ಲಿ ನಿವೃತ್ತರಾದ ನಂತರ ಸಚಿನ್ ಸಾಮಾಜಿಕ ಮಾಧ್ಯಮದಲ್ಲಿ ನಿಜವಾಗಿಯೂ ಸಕ್ರಿಯರಾಗಿದ್ದಾರೆ. ವಿವಿಧ ಅಂಶಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. 
ವಿಶ್ವ ಪ್ರವಾಸೋದ್ಯಮ ದಿನದ ಹಿನ್ನೆಲೆಯಲ್ಲಿ ಕ್ರಿಕೆಟ್ ದೇವರ ಪ್ರವಾಸದ ತುಣುಕು ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!