ಐಪಿಎಲ್ ಪಂದ್ಯ ವೀಕ್ಷಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. 
ಕ್ರಿಕೆಟ್

ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ಆರ್‌ಸಿಬಿಗೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಎಲ್ಲಾ ರಾಜಕೀಯ ನಾಯಕರು ಬಿಡುವಿಲ್ಲದ ಕಸರತ್ತಿನಲ್ಲಿ ತೊಡಿಗಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. 

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಎಲ್ಲಾ ರಾಜಕೀಯ ನಾಯಕರು ಬಿಡುವಿಲ್ಲದ ಕಸರತ್ತಿನಲ್ಲಿ ತೊಡಿಗಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. 

ಕಟ್ಟಾ ಕ್ರಿಕೆಟ್ ಅಭಿಮಾನಿಯಾಗಿರುವ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕೆ ವಿರಾಮ ನೀಡಿ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ನೋಡಿ ಆನಂದಿಸಿದರು. ಕಾಂಗ್ರೆಸ್ ನಾಯಕ ತಾನು ಆರ್‌ಸಿಬಿ ಅಭಿಮಾನಿ ಎಂದು ಹೇಳಿದ್ದು, ಆರ್‌ಸಿಬಿ ಪಂದ್ಯ ಗೆದ್ದ ನಂತರ ಸಂತಸ ವ್ಯಕ್ತಪಡಿಸಿದ್ದಾರೆ. 

ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್‌ಸಿಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪಂದ್ಯ ವೀಕ್ಷಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆಯೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪ್ರಮುಖ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸಲು ಸಿದ್ದರಾಮಯ್ಯ ಅವರು ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದರು.

ಸಿದ್ದರಾಮಯ್ಯ ಅವರ ಜೊತೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಪಂದ್ಯ ವೀಕ್ಷಣೆ ಮಾಡಿದರು. 

16ನೇ ಆವೃತ್ತಿಯ ಐಪಿಎಲ್‌ ಆರಂಭಗೊಂಡಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಕಾದಾಟ ನಡೆಯಿತು. ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!

ಹಬ್ಬದ ಸಂಭ್ರಮದ ನಡುವೆ ದುರಂತ; ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!