ವಿರಾಟ್ ಕೊಹ್ಲಿ 
ಕ್ರಿಕೆಟ್

ಐಪಿಎಲ್ 2023: ಮುಂಬೈ ಇಂಡಿಯನ್ಸ್ ವಿರುದ್ಧ ಅರ್ಧಶತಕ, ಹೊಸ ದಾಖಲೆ ನಿರ್ಮಿಸಿದ ಆರ್ ಸಿಬಿ 'ರನ್ ಮಷಿನ್' ವಿರಾಟ್ ಕೊಹ್ಲಿ

ಐಪಿಎಲ್ ಸೀಸನ್ 16ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಗೆಲುವು ಸಾಧಿಸಿದ್ದು, ಆರ್ ಸಿಬಿ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ 8 ವಿಕೆಗಳ ಭರ್ಜರಿ ಜಯ ದಾಖಲಿಸಿತು. ಇದೇ ಪಂದ್ಯದಲ್ಲಿ ಕೊಹ್ಲಿ ಅಪರೂಪದ ದಾಖಲೆ ಕೂಡ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರು: ಐಪಿಎಲ್ ಸೀಸನ್ 16ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಗೆಲುವು ಸಾಧಿಸಿದ್ದು, ಆರ್ ಸಿಬಿ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ 8 ವಿಕೆಗಳ ಭರ್ಜರಿ ಜಯ ದಾಖಲಿಸಿತು. ಇದೇ ಪಂದ್ಯದಲ್ಲಿ ಕೊಹ್ಲಿ ಅಪರೂಪದ ದಾಖಲೆ ಕೂಡ ನಿರ್ಮಾಣ ಮಾಡಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ ಸಿಬಿ ತಂಡ ಎಂಟು ವಿಕೆಟ್ ಅಂತರದ ಜಯಭೇರಿ ಸಾಧಿಸಿತು.

ಮುಂಬೈ ನೀಡಿದ 172 ರನ್ ಗುರಿ ಬೆನ್ನತ್ತಿದ್ದ ಆರ್ ಸಿಬಿಗೆ ಆರಂಭಿಕರಾದ ಫಾಫ್ ಡುಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಜೊತೆಯಾಟವಾಡಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದರು. ಇವರಿಬ್ಬರು ಮೊದಲ ವಿಕೆಟ್ ಗೆ 148 ರನ್ ಒಟ್ಟುಗೂಡಿಸಿದರು. ಫಾಫ್ ಡುಪ್ಲೆಸಿಸ್ 43 ಎಸೆತಕ್ಕೆ 73 ರನ್ ಗಳಿಸಿದರೆ, ವಿರಾಟ್ ಕೊಹ್ಲಿ ಅವರು 49 ಎಸೆತದಲ್ಲಿ ಅಜೇಯ 82 ರನ್ ಬಾರಿಸಿದರು. ಆ ಮೂಲಕ ಐಪಿಎಲ್ ವೃತ್ತಿ ಜೀವನದ 50ನೇ ಅರ್ಧಶತಕ ಭಾರಿಸಿದರು.

ವಿರಾಟ್ ಕೊಹ್ಲಿ ಅವರಿಗೆ ಇದು ಐಪಿಎಲ್‌ ನಲ್ಲಿ 50ನೇ 50 ಪ್ಲಸ್ ಸ್ಕೋರ್ ಆಗಿದೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. 

ಒಟ್ಟಾರೆ ಡೆಲ್ಲಿ ಕ್ಯಾಪಿಟಲ್ಸ್ ಓಪನರ್ ಡೇವಿಡ್ ವಾರ್ನರ್ 60 50 ಪ್ಲಸ್ ಸ್ಕೋರ್ ನೊಂದಿಗೆ ಅಗ್ರಸ್ಥಾನದಲ್ಲಿದ್ದು, ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ 49 ರೊಂದಿಗೆ ಒಟ್ಟಾರೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ಪ್ರಸ್ತುತ 45 ಅರ್ಧಶತಕಗಳು ಮತ್ತು 5 ಶತಕಗಳನ್ನು ಬಾರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT