ಕೆಕೆಆರ್ ತಂಡ 
ಕ್ರಿಕೆಟ್

IPL 2023: ಕೋಲ್ಕತ್ತಾ ವಿರುದ್ಧ ಆರ್ ಸಿಬಿ ಗೆ 81 ರನ್‌ ಸೋಲು!

ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿದೆ.

ಕೋಲ್ಕತ್ತಾ: ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್‌ಗಳಿಂದ ಸೋಲಿಸಿದೆ. 

ಟಾಸ್ ಗೆದ್ದ RCB ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 204 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆರ್ ಸಿಬಿ 123 ರನ್‌ಗಳಿಗೆ ಸೋಲು ಕಂಡಿದೆ.
 
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 81 ರನ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ ಕೋಲ್ಕತ್ತಾ ತಂಡ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ಶಾರ್ದೂಲ್ ಠಾಕೂರ್ ಅವರ 68, ರಹಮಾನುಲ್ಲಾ ಗುರ್ಬಾಜ್ ಅವರ 57 ಮತ್ತು ರಿಂಕು ಸಿಂಗ್ ಅವರ 46 ರನ್‌ಗಳಿಂದ ಏಳು ವಿಕೆಟ್‌ಗೆ 204 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬೆಂಗಳೂರು ತಂಡ 17.4 ಓವರ್‌ಗಳಲ್ಲಿ 123 ರನ್‌ಗಳಿಗೆ ಆಲೌಟಾಯಿತು. ಬೆಂಗಳೂರು ಪರ ನಾಯಕ ಫಾಫ್ ಡುಪ್ಲೆಸಿಸ್ ಗರಿಷ್ಠ 23 ರನ್ ಗಳಿಸಿದರು.

ಕೋಲ್ಕತ್ತಾ ಪರ ವರುಣ್ ಚಕ್ರವರ್ತಿ 4, ಸುಯಶ್ ಶರ್ಮಾ 3 ಹಾಗೂ ಸುನಿಲ್ ನರೈನ್ 2 ವಿಕೆಟ್ ಪಡೆದರು. ಶಾರ್ದೂಲ್ ಠಾಕೂರ್ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!