ಆರ್ ಸಿಬಿಯ ಕೊಹ್ಲಿ,ಫಾಪ್ ಡು ಪ್ಲೆಸಿಸ್ ಮತ್ತು ಜೂಹ್ಲಿ ಚಾವ್ಲಾ ಚಿತ್ರ 
ಕ್ರಿಕೆಟ್

ಐಪಿಎಲ್ 2023: ಕೆಕೆಆರ್ ಎದುರು ಆರ್ ಸಿಬಿ ಸೋತಿದ್ದಕ್ಕೆ ಫುಲ್ ಖುಷಿಯಾದ ಜೂಹಿ ಚಾವ್ಲಾ, ಹೇಳಿದ್ದು ಹೀಗೆ...

ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೆಕೆಆರ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತಿದ್ದಕ್ಕೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಫುಲ್ ಖುಷಿಯಾಗಿದ್ದಾರೆ.

ಕೋಲ್ಕತ್ತಾ:  ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೆಕೆಆರ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯವಾಗಿ ಸೋತಿದ್ದಕ್ಕೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಫುಲ್ ಖುಷಿಯಾಗಿದ್ದಾರೆ.

ಪಂದ್ಯ ಮುಗಿದ ನಂತರ ಎಎನ್ ಐ ಜೊತೆಗೆ  ಮಾತನಾಡಿದ ಜೂಹ್ಲಿ ಚಾವ್ಲಾ, ಇದೇ ರೀತಿ ಎಲ್ಲಾ ಪಂದ್ಯಗಳನ್ನು ಗೆದ್ದು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫೈನಲ್ ಪ್ರವೇಶಿಸಲಿ ಎಂದು ಹಾರೈಸಿದರು.

ಕೆಕೆಆರ್ ತಂಡದ ಪ್ರದರ್ಶನದಿಂದ ನನಗೆ ತುಂಬಾ ಸಂತಸವಾಗಿದೆ. ಎಲ್ಲಾ ರೀತಿಯ ಪಂದ್ಯಗಳು ಇದೇ ರೀತಿ ಅಂತ್ಯವಾಗಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಅದೇ ಭರವಸೆಯಿದೆ ಎಂದು ಅವರು ಹೇಳಿದರು.

ಕೆಕೆಆರ್ ತಂಡ ಈ ಬಾರಿಯ ಎಲ್ಲಾ ಪಂದ್ಯಗಳನ್ನು ಇದೇ ರೀತಿ ಗೆದ್ದು, ಫೈನಲ್  ತಲುಪಿ ಚಾಂಪಿಯನ್ ಆಗಲಿ ಎಂದು ಹಾರೈಸುವುದಾಗಿ ಜೂಹಿ ಚಾವ್ಲಾ ಹೇಳಿದರು. ಬಾಲಿವುಡ್ ನಟಿ ಜೂಹಿ ಚಾವ್ಲಾ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸಹ ಮಾಲೀಕರಾಗಿದ್ದಾರೆ.

ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್  81 ರನ್ ಗಳ ಅಂತರದಿಂದ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸುವ ಮೂಲಕ  ಈ ಬಾರಿಯ ಐಪಿಎಲ್ ನಲ್ಲಿ ಮೊದಲ ಗೆಲುವು ದಾಖಲಿಸಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್