ಜೈಸ್ವಾಲ್, ಬಟ್ಲರ್ 
ಕ್ರಿಕೆಟ್

ಐಪಿಎಲ್ 2023: ಜೈಸ್ವಾಲ್, ಬಟ್ಲರ್ ಅರ್ಧಶತಕ, ಡೆಲ್ಲಿ ವಿರುದ್ಧ 57 ರನ್ ಅಂತರದಿಂದ ರಾಜಸ್ಥಾನ ಗೆಲುವು

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಐಪಿಎಲ್ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 57 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದೆ.

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಐಪಿಎಲ್ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ 57 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ನಿಗದಿತ ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್  ಕಲೆ ಹಾಕಿತು.

ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ 31 ಎಸೆತಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ನೊಂದಿಗೆ 60 ರನ್ ಗಳಿಸಿದರೆ, ಜೋಸ್ ಬಟ್ಲರ್ 51 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ನೊಂದಿಗೆ 79, ಹೆಟ್ಮಿಯರ್ 4 ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 39 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಮುಕೇಶ್ ಕುಮಾರ್ 2,ಕುಲದೀಪ್ ಯಾದವ್ ಹಾಗೂ ಪೊವೆಲ್ ತಲಾ 1 ವಿಕೆಟ್ ಪಡೆದರು.

ನಂತರ ರಾಜಸ್ಥಾನ ರಾಯಲ್ಸ್ ನೀಡಿದ 200 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ  ನಿಗದಿತ ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಲಷ್ಟೇ ಶಕ್ತವಾಯಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 65, ಲಲಿತ್ ಯಾದವ್ 38 ರನ್ ಗಳಿಸಿದರು. ಉಳಿದ ಯಾವುದೇ ಆಟಗಾರರು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ನಿಲಲಿಲ್ಲ. ಇದರಿಂದಾಗಿ 57 ರನ್ ಗಳ ಅಂತರದಿಂದ ರಾಜಸ್ಥಾನ ರಾಯಲ್ಸ್ ತಂಡ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video