ಶಿಮ್ರಾನ್​​ ಹೆಟ್ಮೆಯರ್ 
ಕ್ರಿಕೆಟ್

ಐಪಿಎಲ್ 2023: ಗುಜರಾತ್ ವಿರುದ್ಧ ರಾಜಸ್ಥಾನ ರಾಯಲ್ಸ್‌ಗೆ 3 ವಿಕೆಟ್ ಗೆಲುವು

ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​​ ವಿರುದ್ಧ ರಾಜಸ್ಥಾನ ರಾಯಲ್ಸ್‌ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಅಹಮ್ಮದಾಬಾದ್: ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​​ ವಿರುದ್ಧ ರಾಜಸ್ಥಾನ ರಾಯಲ್ಸ್‌ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಗುಜರಾತ್​ ಟೈಟಾನ್ಸ್ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ ನಿಗದಿತ 20 ಓವರ್​ನಲ್ಲಿ 7 ವಿಕೆಟ್​ ನಷ್ಟಕ್ಕೆ 177 ರನ್ ಗಳಿಸಿತು.

ಗೆಲುವಿಗೆ 178 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್‌ ಶಿಮ್ರಾನ್​​ ಹೆಟ್ಮೆಯರ್​ ಮತ್ತು ಸಂಜು ಸ್ಯಾಮ್ಸನ್​ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಹ್ಯಾಟ್ರಿಕ್​ ಗೆಲುವು ದಾಖಲಿಸಿದ್ದು, ಟೂರ್ನಿಯಲ್ಲಿ 4ನೇ ಗೆಲುವಿನ ಮೂಲಕ 8 ಅಂಕ ಪಡೆದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಗುಜರಾತ್ ಪರ ಆರಂಭಿಕ ಆಟಗಾರ ವೃದ್ಧಿಮಾನ್​ ಸಾಹ(4) ಮತ್ತು 3ನೇ ಕ್ರಮಾಂಕದಲ್ಲಿ ಬ್ಯಾಟ್​ ಬೀಸಿದ ಸಾಯಿ ಸುದರ್ಶನ್​(20) ಬೇಗನೇ ವಿಕೆಟ್​ ಒಪ್ಪಿಸಿದರು.

ಗುಜರಾತ್ ತಂಡ 32 ರನ್​ಗಳಿಗೆ 2 ವಿಕೆಟ್​ ಕಳೆದುಕೊಂಡಿದ್ದ ಸಂದರ್ಭದಲ್ಲಿ ಆರಂಭಿಕ ಆಟಗಾರ ಶುಭ್ಮನ್​ ಗಿಲ್(45) ಹಾಗೂ ಡೇವಿಡ್ ಮಿಲ್ಲರ್(46) ಅವರ ಸಂಘಟಿಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!