ಸಿಎಸ್ ಕೆ ಆಟಗಾರರು 
ಕ್ರಿಕೆಟ್

ಐಪಿಎಲ್ 2023: ಆರ್ ಸಿಬಿ ವಿರುದ್ಧ ಚೆನ್ನೈಗೆ 8 ರನ್ ಗಳ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್, ಡೆವೊನ್ ಕಾನ್ವೆ(83) ಮತ್ತು ಶಿವಂ ದುಬೆ(52) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್​ನಲ್ಲಿ 6 ವಿಕೆಟ್​ ನಷ್ಟಕ್ಕೆ 226 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ಗೆಲುವಿಗೆ 227 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಆರ್ ಸಿಬಿ, ನಾಯಕ ಫಾಪ್ ಮತ್ತು ಮ್ಯಾಕ್ಸ್ ವೆಲ್ ಅವರ ಭರ್ಜರಿ ಪ್ರದರ್ಶನದ ಹೊರತಾಗಿಯೂ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 218 ರನ್‌ ಗಳಿಸಲಷ್ಟೇ ಶಕ್ತವಾಯ್ತು. ಆ ಮೂಲಕ ಕೇವಲ 8 ರನ್‌ಗಳಿಂದ ಸಿಎಸ್‌ಕೆ ರೋಚಕ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರು ಸ್ಥಾನ ಮೇಲೆಕ್ಕೇರಿದೆ. 

ಚೆನ್ನೈ ಪರ ತುಷಾರ್​ ದೇಶಪಾಂಡೆ ನಾಲ್ಕು ಓವರ್​ ಮಾಡಿ 45 ರನ್ ನೀಡಿ ಪ್ರಮುಖ ಮೂರು ವಿಕೆಟ್​ ಪಡೆದು ಮಿಂಚಿದರು. ಉಳದಂತೆ ಆಕಾಶ್​ ಸಿಂಗ್​ 1 ವಿಕೆಟ್​, ಮಹೀಶಾ ತೀಕ್ಷಣ್​ 1 ವಿಕೆಟ್​, ಮತೇಶಾ ಪ್ರತಿರಣ್​ 2 ವಿಕೆಟ್​ ಮತ್ತು ಮೋಯಿನ್​ ಅಲಿ 1 ವಿಕೆಟ್​ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್