ಕ್ರಿಕೆಟ್

ಐಪಿಎಲ್ 2023: ಸನ್‌ರೈಸರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 14 ರನ್‌ಗಳ ಜಯ

Lingaraj Badiger

ಹೈದರಾಬಾದ್: ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 14 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ಇಂಡಿಯನ್ಸ್, ಕ್ಯಾಮೆರಾನ್ ಗ್ರೀನ್(ಅಜೇಯ 64 ರನ್) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 192 ರನ್ ಗಳಿಸಿತು.

ಗೆಲುವಿಗೆ 193 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಸನ್​ರೈಸರ್ಸ್​ ಹೈದರಾಬಾದ್ ತಂಡ, 19.5 ಓವರ್​ಗಳಲ್ಲಿ 178 ರನ್​ಗಳಿಸಿ ಆಲೌಟ್ ಆಯಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್​ಗಳ ಗೆಲುವು ದಾಖಲಿಸಿತು. 

ಸನ್​ರೈಸರ್ಸ್​ ಹೈದರಾಬಾದ್ ಪರ ಕನ್ನಡಿಗ ಮಯಾಂಕ್ ಅಗರ್ವಾಲ್​ 48, ನಾಯಕ ಮಾರ್ಕ್ರಮ್​ 22, ಹೆನ್ರಿಚ್ ಕ್ಲಾಸೆನ್​ 36, ಮಾರ್ಕೊ ಜಾನ್ಸನ್​ 13 ರನ್​ಗಳಿಸಿದರು.

ಮುಂಬೈ ಇಂಡಿಯನ್ಸ್ ಪರ ಜೇಸನ್ ಬೆಹ್ರೆನ್ಡಾರ್ಫ್ 2, ರಿಲೇ ಮೆರಿಡಿತ್ 2, ಪಿಯೂಷ್ ಚಾವ್ಲಾ 2, ಅರ್ಜುನ್ ತೆಂಡೂಲ್ಕರ್ ಮತ್ತು ಗ್ರೀನ್ ತಲಾ ಒಂದು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

SCROLL FOR NEXT