ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಪಿಎಲ್ 2023: ಕೊಹ್ಲಿ, ಡುಪ್ಲೆಸಿಸ್ ಅರ್ಧಶತಕ; ಪಂಜಾಬ್ ಗೆ ಗೆಲ್ಲಲು 175 ರನ್ ಗುರಿ ನೀಡಿದ ಆರ್ ಸಿಬಿ

ಆರಂಭಿಕರಾದ ಫಾಫ್ ಡು ಪ್ಲೆಸಿಸ್ (84) ಮತ್ತು ವಿರಾಟ್ ಕೊಹ್ಲಿ (59) ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 175 ರನ್ ಗಳ ಗುರಿಯನ್ನು ನೀಡಿದೆ.

ಆರ್ ಸಿಬಿ ತಂಡ
Vishwanath S
Updated On : 20 Apr 2023, 6:34 pm

ಪಂಜಾಬ್: ಆರಂಭಿಕರಾದ ಫಾಫ್ ಡು ಪ್ಲೆಸಿಸ್ (84) ಮತ್ತು ವಿರಾಟ್ ಕೊಹ್ಲಿ (59) ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗುರುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 175 ರನ್ ಗಳ ಗುರಿಯನ್ನು ನೀಡಿದೆ.

ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್ ಸಿಬಿ ಮೊದಲು ಬ್ಯಾಟಿಂಗ್ ಆರಂಭಿಸಿತ್ತು. ಡು ಪ್ಲೆಸಿಸ್ ಮತ್ತು ಕೊಹ್ಲಿ ಆರ್‌ಸಿಬಿಗೆ ಸ್ಫೋಟಕ ಆರಂಭ ನೀಡಿದರು. ಆದರೆ ಇನ್ನಿಂಗ್ಸ್ ಮುಂದುವರೆದಂತೆ, ಆರ್‌ಸಿಬಿಯ ರನ್ ವೇಗವು ನಿಧಾನವಾಯಿತು. ಅಂತಿಮವಾಗಿ 4 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿದೆ. 

ಪಂಜಾಬ್ ಪರ ಹರ್ ಪ್ರೀತ್ ಬ್ರಾರ್ 2 ವಿಕೆಟ್, ಹರ್ಷ್ ದೀಪ್ ಸಿಂಗ್ ಮತ್ತು ನಾಥನ್ ಇಲ್ಲಿಸ್ ತಲಾ 1 ವಿಕೆಟ್ ಪಡೆದಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments