ಸಿಎಸ್ ಕೆ ಆಟಗಾರರ ಗೆಲುವಿನ ಸಂಭ್ರಮ 
ಕ್ರಿಕೆಟ್

ಐಪಿಎಲ್ 2023: ಹೈದರಾಬಾದ್ ವಿರುದ್ಧ ಚೆನ್ನೈಗೆ 7 ವಿಕೆಟ್ ಗಳ ಭರ್ಜರಿ ಗೆಲುವು

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ 29ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಸನ್‌ರೈಸರ್ಸ್ ಹೈದರಾಬಾದ್, ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 134 ರನ್ ಗಳಿಸಿತು.

ಗೆಲುವಿಗೆ 135 ರನ್ ಗಳ ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ಡೆವೊನ್ ಕಾನ್ವೇ ಅವರ ಭರ್ಜರಿ ಅರ್ಧಶತಕದ ನೆರವಿನಿಂದ 18.4 ಓವರ್​ಗಳಿಗೆ 3  ವಿಕೆಟ್ ನಷ್ಟಕ್ಕೆ 138 ರನ್​ ಗಳಿಸುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿತು.

77 ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಡೆವೊನ್ ಕಾನ್ವೇ ಹಾಗೂ ಮೂರು ವಿಕೆಟ್ ಪಡೆದ ರವೀಂದ್ರ ಜಡೇಜಾ ಚೆನ್ನೈ ಸುಲಭ ಗೆಲುವಿಗೆ ಕಾರಣರಾದರು.

ಚೆನ್ನೈ ಪರ ರುತುರಾಜ್​ ಗಾಯಕ್ವಾಡ್​ 35 ರನ್​, ಅಜಿಂಕ್ಯಾ ರಹಾನೆ 9 ರನ್ ಮತ್ತು ಅಂಬಾಟಿ ಯಾಡು 9 ರನ್, ಮೋಯಿನ್, ಅಲಿ 6 ರನ್​ ಗಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT