ಆರ್ ಸಿಬಿ 
ಕ್ರಿಕೆಟ್

IPL 2023: ಡುಪ್ಲೆಸಿಸ್, ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್; ರಾಜಸ್ತಾನಕ್ಕೆ 190 ರನ್ ಗುರಿ ನೀಡಿದ ಆರ್ ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 32ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 189 ರನ್ ಪೇರಿಸಿದೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2023ರ 32ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 189 ರನ್ ಪೇರಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು. ಈ ಪಂದ್ಯದಲ್ಲೂ ಆರ್‌ಸಿಬಿ ನಾಯಕತ್ವವನ್ನು ವಿರಾಟ್ ಕೊಹ್ಲಿ ವಹಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡುತ್ತಿದೆ. 

ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿಂದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ ಪೇರಿಸಿದರು. ನಂತರ ಬಂದ ಶಹಬಾಜ್ ಅಹ್ಮದ್ ಸಹ ಎರಡು ರನ್ ಗಳಿಸಿ ಔಟಾದರು. ಈ ವೇಳೆ ಜೊತೆಯಾದ ಫಾಫ್ ಡುಪ್ಲೆಸಿಸ್ (62) ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ (77) ರನ್ ಗಳ ಭರ್ಜರಿ ಬ್ಯಾಟಿಂಗ್ ಮಾಡಿದ್ದು ತಂಡದ ಸ್ಪರ್ಧಾತ್ಮಕ ರನ್ ಕಲೆಹಾಕಲು ಸಾಧ್ಯವಾಯಿತು. 

ರಾಜಸ್ಥಾನ ರಾಯಲ್ಸ್ ಪರ ಟ್ರೆಂಟ್ ಬೌಲ್ಟ್ ಮತ್ತು ಸಂದೀಪ್ ಶರ್ಮಾ ತಲಾ 2 ವಿಕೆಟ್ ಪಡೆದರೆ, ಅಶ್ವಿನ್ ಮತ್ತು ಚಹಾಲ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!