ಗುಜರಾತ್ ಗೆ ಜಯ 
ಕ್ರಿಕೆಟ್

ಐಪಿಎಲ್ 2023: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆ 55 ರನ್ ಗಳ ಭರ್ಜರಿ ಜಯ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 55 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 55 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ನೀಡಿದ 208ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 55 ರನ್ ಗಳ ಹೀನಾಯ ಸೋಲು ಕಂಡಿತು.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ 6 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.  ಮುಂಬೈ ತಂಡ ಆರಂಭದಲ್ಲೇ ನಾಯಕ ರೋಹಿತ್‌ ಶರ್ಮಾ (Rohith Sharma) ವಿಕೆಟ್‌ ಕಳೆದುಕೊಂಡಿತು.

59 ರನ್‌ಗಳಿಸುವಷ್ಟರಲ್ಲಿ ಪ್ರಮುಖ 5 ವಿಕೆಟ್‌ ಕಳೆದುಕೊಂಡಿತ್ತು. ಕ್ಯಾಮರೂನ್‌ ಗ್ರೀನ್‌ 33 ರನ್(26‌ ಎಸೆತ, 3 ಸಿಕ್ಸರ್‌), ಸೂರ್ಯಕುಮಾರ್‌ ಯಾದವ್‌ 23 ರನ್‌ (12 ಎಸೆತ, 3 ಬೌಂಡರಿ,1 ಸಿಕ್ಸರ್‌), ನೆಹಾಲ್ ವಧೇರಾ 40 ರನ್‌ (21 ಎಸೆತ, 3 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಸ್ವಲ್ಪ ಪ್ರತಿರೋಧ ತೋರಿದರು.

ನೂರ್‌ ಅಹ್ಮದ್‌ 3 , ರಶೀದ್‌ ಖಾನ್‌ ಮತ್ತು ಮೋಹಿತ್‌ ಶರ್ಮಾ ತಲಾ 2, ಹಾರ್ದಿಕ್‌ ಪಾಂಡ್ಯ 1 ವಿಕೆಟ್‌ ಪಡೆದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು