ರಾಜಸ್ಥಾನ ರಾಯಲ್ಸ್ ಗೆ ಜಯ 
ಕ್ರಿಕೆಟ್

ಐಪಿಎಲ್ 2023: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 32 ರನ್ ಗಳ ಭರ್ಜರಿ ಜಯ

ಐಪಿಎಲ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ 32 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಜೈಪುರ: ಐಪಿಎಲ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ 32 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ಯಶಸ್ವಿ ಜೈಸ್ವಾಲ್ (77) ಮತ್ತು ಧ್ರುವ್ ಜುರೆಲ್ (34 ರನ್)ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತು. ಆ ಮೂಲಕ ಚೆನ್ನೈಗೆ ಗೆಲ್ಲಲು 203 ರನ್ ಗಳ ಬೃಹತ್ ಗುರಿ ನೀಡಿತು.

ಈ ಮೊತ್ತವನ್ನು ಬೆನ್ನು ಹತ್ತಿದ ಧೋನಿ ಪಡೆ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್ ಗೆ ರುತುರಾಡ್ ಗಾಯಕ್ವಾಡ್ (47 ರನ್) ಮತ್ತು ಡೆವಾನ್ ಕಾನ್ವೆ (8 ರನ್) 42 ರನ್ ಗಳ ಜೊತೆಯಾಟ ನೀಡಿತು. ಆದರೆ ಈ ಹಂತದಲ್ಲಿ ಕ್ರೀಸ್ ನಲ್ಲಿ ನೆಲೆಯೂರಲು ಯತ್ನಿಸುತ್ತಿದ್ದ ಕಾನ್ವೆ ಜಂಪಾ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್ ಗೆ ಬಂದ ರಹಾನೆ 15 ರನ್ ಗಳಿಸಿ ವಿಕೆಟ್ ಒಪ್ಪಿಸಿ ತಂಡವನ್ನು ಸಂಕಷ್ಟಕ್ಕೀಡು ಮಾಡಿದರು. ಈ ವೇಳೆ ಕ್ರೀಸ್ ಗೆ ಬಂದ ಶಿವಂದುಬೆ (52 ರನ್ ) ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. 

ಅಂಬಾಟಿ ರಾಯುಡು ಶೂನ್ಯ ಸುತ್ತಿದರೆ, ಮೊಯೀನ್ ಅಲಿ 23 ರನ್ ಗಳಿಸಿ ನಿರ್ಗಮಿಸಿದರು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ 23 ರನ್ ಗಳಿ ಹೋರಾಟ ನಡೆಸಿದರಾದರೂ ಅಂತಿಮ ಎಸೆತದಲ್ಲಿ ದುಬೆ ಔಟಾಗುವುದರೊಂದಿಗೆ ಚೆನ್ನೈ ಇನ್ನಿಂಗ್ಸ್ ಗೆ ತೆರೆ ಬಿತ್ತು. ಅಂತಿಮವಾಗಿ ಚೆನ್ನೈ ತಂಡ ನಿಗಧಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 32 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು