ವಿಜಯ್ ಶಂಕರ್ 
ಕ್ರಿಕೆಟ್

ಐಪಿಎಲ್ 2023: ವಿಜಯ್ ಶಂಕರ್ ಅರ್ಧ ಶತಕ, 7 ವಿಕೆಟ್ ಗಳಿಂದ ಕೆಕೆಆರ್ ಮಣಿಸಿದ ಗುಜರಾತ್ ಟೈಟನ್ಸ್ 

ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2023ರ ಆವೃತ್ತಿಯ 39ನೇ ಪಂದ್ಯದಲ್ಲಿ ವಿಜಯ್ ಶಂಕರ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಗುಜರಾತ್ ಟೈಟನ್ಸ್ 7 ವಿಕೆಟ್ ಗಳಿಂದ ಕೆಕೆಆರ್ ಮಣಿಸಿದೆ. 

ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2023ರ ಆವೃತ್ತಿಯ 39ನೇ ಪಂದ್ಯದಲ್ಲಿ ವಿಜಯ್ ಶಂಕರ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಗುಜರಾತ್ ಟೈಟನ್ಸ್ 7 ವಿಕೆಟ್ ಗಳಿಂದ ಕೆಕೆಆರ್ ಮಣಿಸಿದೆ. 

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.  ಕೆಕೆಆರ್ ಪರ ರಹಮುಲ್ಲಾ ಗುರ್ಬಾಜ್ 81,ಆಂಡ್ರೆ ರಸೆಲ್ 34, ನಾರಾಯಣ್ ಜಗದೀಶನ್ ಮತ್ತು ರಿಂಕು ಸಿಂಗ್ ತಲಾ 19 ರನ್ ಗಳಿಸಿದರು.

ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರೆ, ಜೊಸ್ ಲಿಟ್ಲ್, ನೂರ್ ಅಹಮದ್, ತಲಾ ವಿಕೆಟ್ ಪಡೆದರು.  ಕೆಕೆಆರ್ ನೀಡಿದ 180 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಗುಜರಾತ್ ಟೈಟನ್ಸ್ 17. 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 180 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಗುಜರಾತ್ ಟೈಟನ್ಸ್ ಪರ ಶುಭ್ ಮನ್ ಗಿಲ್ 49 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 26, ವಿಜಯ್ ಶಂಕರ್ ಅಜೇಯ 51, ಡೇವಿಡ್ ಮಿಲ್ಲರ್ 32 ರನ್ ಗಳಿಸಿದರು. ಜೊಸ್ ಲಿಟ್ಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT