ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

'ನಮಗೆ ಲಕ್ಸುರಿ ಬೇಡ, ಆದರೆ..': ವಿಂಡೀಸ್‌ ಕ್ರಿಕೆಟ್‌ ಮಂಡಳಿ ವಿರುದ್ಧ ಹಾರ್ದಿಕ್ ಪಾಂಡ್ಯ ಕಿಡಿ, BCCI ಗೆ ದೂರು!

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಕಿಡಿಕಾರಿದ್ದಾರೆ. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ತಂಡದ ಆಟಗಾರರಿಗೆ ಸಾಮಾನ್ಯ ವ್ಯವಸ್ಥೆಗಳನ್ನೂ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಟ್ರಿನಿಡಾಡ್ ನ ಬ್ರಿಯಾನ್‌ ಲಾರಾ ಕ್ರಿಕೆಟ್‌ ಅಕಾಡೆಮಿ ಸ್ಟೇಡಿಯಂನಲ್ಲಿ ಮಂಗಳವಾರ (ಆಗಸ್ಟ್‌ 1) ನಡೆದ ಏಕದಿನ ಕ್ರಿಕೆಟ್‌ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಅಧಿಕಾರಯುತ ಆಟವಾಡಿದ ಹಾರ್ದಿಕ್ ಪಾಂಡ್ಯ ಸಾರಥ್ಯದ ಭಾರತ ತಂಡ 200 ರನ್‌ಗಳ ಭಾರಿ ಅಂತರದಲ್ಲಿ ಆತಿಥೇಯ ವಿಂಡೀಸ್ ತಂಡವನ್ನು ಮಣಿಸಿ, 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಈ ಪಂದ್ಯದ ಬಳಿಕ ಮಾತನಾಡಿದ ನಾಯಕ ಪಾಂಡ್ಯ, 'ಪ್ರವಾಸಿ ತಂಡಕ್ಕೆ ಲಭ್ಯವಾಗುತ್ತಿರುವ ಕಳಪೆ ಆತಿಥ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಸಾಮಾನ್ಯ ವ್ಯವಸ್ಥೆಗಳನ್ನು ಒದಗಿಸಲು ವಿಫಲವಾಗಿರುವ ವೆಸ್ಟ್‌ ಇಂಡೀಸ್ ಕ್ರಿಕೆಟ್‌ ಮಂಡಳಿ ಸಮಸ್ಯೆಗಳನ್ನು ಈ ಕೂಡಲೇ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

"ನಾವು ಆಡಿದ ಅತ್ಯುತ್ತಮ ಕ್ರಿಕೆಟ್‌ ಕ್ರೀಡಾಂಗಣಗಳಲ್ಲಿ ಇದೂ ಒಂದು. ಮುಂದಿನ ಬಾರಿ ನಾವು ವೆಸ್ಟ್‌ ಇಂಡೀಸ್‌ ಪ್ರವಾಸ ಕೈಗೊಂಡಾಗ ಪರಿಸ್ಥಿತಿಗಳು ಮತ್ತಷ್ಟು ಸುಧಾರಿಸಿರುತ್ತವೆ ಎಂದು ಭಾವಿಸುತ್ತೇನೆ. ಪ್ರಯಾಣದಿಂದ ಹಿಡಿದು ಎಲ್ಲ ಸಂಗತಿಗಳನ್ನು ನಿಭಾಯಿಸುವ ಕಡೆಗೆ ಸಾಕಷ್ಟು ಸುಧಾರಣೆ ಆಗಬೇಕಿದೆ. ಕಳೆದ ಪ್ರವಾಸದಲ್ಲಿಯೂ ಹಲವು ಸಮಸ್ಯೆಗಳು ಎದುರಾಗಿದ್ದವು. ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿಗೆ ಎಚ್ಚೆತ್ತುಕೊಳ್ಳಲು ಇದು ಸರಿಯಾದ ಸಮಯ. ಇಲ್ಲಿಗೆ ಪ್ರಯಾಣ ಬೆಳೆಸುವ ತಂಡಗಳನ್ನು ಉತ್ತಮವಾಗಿ ನಡೆಸಿಕೊಳ್ಳುವ ಅಗತ್ಯವಿದೆ. ನಾವಿಲ್ಲಿ ಐಶಾರಾಮಿ ಆತಿಥ್ಯ ಎದುರು ನೋಡುತ್ತಿಲ್ಲ. ಬದಲಿಗೆ ಸರಳ ಮತ್ತು ಸಾಮಾನ್ಯ ಸಂಗತಿಗಳ ವ್ಯವಸ್ಥೆಯಾಗುವ ಅಗತ್ಯವಿದೆ. ಉಳಿದಂತೆ ಇಲ್ಲಿ ಬಂದು ಆಡುವುದು ಸಂತಸ ಹೆಚ್ಚಿಸಿದೆ ಎಂದು ಪಾಂಡ್ಯ ಹೇಳಿದ್ದಾರೆ.

ಮೂಲಗಳ ಪ್ರಕಾರ ಈ ಬಾರಿ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿ ಭಾರತ ತಂಡ ಸಾಕಷ್ಟು ಸಮಸ್ಯೆ ಎದುರಿಸಿದೆ ಎಂದು ವರದಿಯಾಗಿದೆ. ವಿಮಾನ ವೇಳಾಪಟ್ಟಿಯಲ್ಲಿನ ಗೊಂದಲ, ತಡರಾತ್ರಿ ಪ್ರಯಾಣ ಎಲ್ಲದರಿಂದ ಆಟಗಾರರಿಗೆ ಸರಿಯಾದ ನಿದ್ರೆ ಇಲ್ಲದಂತ್ತಾಗಿ ಏಕದಿನ ಕ್ರಿಕೆಟ್‌ ಸರಣಿಗೆ ತಯಾರಿ ನಡೆಸಲು ಸಮಸ್ಯೆಯಾಗಿತ್ತು. ಈ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಬಿಸಿಸಿಐಗೆ ಕೂಡ ದೂರು ನೀಡಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿಲ್ಲ.  
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT