ವೆಸ್ಟ್ ಇಂಡೀಸ್ ವಿರುದ್ಧ ಮತ್ತೆ ಮುಗ್ಗರಿಸಿದ ಭಾರತ 
ಕ್ರಿಕೆಟ್

2ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಮತ್ತೆ ಭಾರತಕ್ಕೆ ಸೋಲು

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಭಾರತ ಮುಗ್ಗರಿಸಿದ್ದು, ಟೀಂ ಇಂಡಿಯಾ ವಿರುದ್ಧ ವಿಂಡೀಸ್ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ಗಯಾನ: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಭಾರತ ಮುಗ್ಗರಿಸಿದ್ದು, ಟೀಂ ಇಂಡಿಯಾ ವಿರುದ್ಧ ವಿಂಡೀಸ್ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ.

ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎದುರು ಭಾರತ ಪರಾಭವಗೊಂಡಿದೆ. ಭಾರತ ನೀಡಿದ 153 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ವೆಸ್ಟ್ ಇಂಡೀಸ್ ತಂಡ 18.5 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ 2 ವಿಕೆಟ್ ಅಂತರದ ರೋಚಕ ಜಯ ಸಾಧಿಸಿತು.

ವಿಂಡೀಸ್ ಪರ ನಿಕೋಲಸ್ ಪೂರನ್ 40 ಎಸೆತಗಳಲ್ಲಿ 67 ರನ್ ಸಿಡಿಸಿ ವಿಂಡೀಸ್ ಗೆಲುವಿನಲ್ಲಿ ಮಹತ್ತರ ಪಾತ್ರ ನಿರ್ವಹಿಸಿದರು. ಒಂದೆಡೆ ವಿಕೆಟ್ ಗಳು ಉರುಳುತ್ತಿದ್ದರೂ, ನಾಯಕ ರೋವ್ಮನ್ ಪೊವೆಲ್ (21 ರನ್) ಮತ್ತು ಶಿಮ್ರಾನ್ ಹೇಟ್ಮೆಯರ್ (22 ರನ್) ಅಂತಿಮ ಹಂತದಲ್ಲಿ ತಂಡಕ್ಕೆ ನೆರವಾದರು. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡ 18.5 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ 2 ವಿಕೆಟ್ ಅಂತರದ ರೋಚಕ ಜಯ ಸಾಧಿಸಿತು. ಆ ಮೂಲಕ ಟಿ20 ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 152 ರನ್‌ಗಳ ಮೊತ್ತ ಗಳಿಸಿತು. ಭಾರತದ ಪರ ತಮ್ಮ ವೃತ್ತಿಜೀವನದಲ್ಲಿ ಎರಡನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಆಡಿದ ತಿಲಕ್ ವರ್ಮಾ ಅರ್ಧಶತಕಗಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ