ವಹಾಬ್ ರಿಯಾಜ್ ನಿವೃತ್ತಿ ಘೋಷಣೆ 
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾಕಿಸ್ತಾನ ಸ್ಚಾರ್ ವೇಗಿ ವಹಾಬ್ ರಿಯಾಜ್ ನಿವೃತ್ತಿ ಘೋಷಣೆ

ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

ಇಸ್ಲಾಮಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ವಹಾಬ್ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸುವ ನಿರ್ಧಾರ ಕೈಗೊಂಡಿದ್ದೇನೆ. ಆದರೆ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಂತೆಯೇ ಪಿಸಿಬಿ, ನನ್ನ ಕುಟುಂಬ, ತರಬೇತುದಾರರು, ಮಾರ್ಗದರ್ಶಕರು, ತಂಡದ ಸಹ ಆಟಗಾರರು, ಅಭಿಮಾನಿಗಳು ಮತ್ತು ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ಆದರೆ ಫ್ರಾಂಚೈಸಿ ಕ್ರಿಕೆಟ್ ಆಡುವುದನ್ನು ಮುಂದುವರೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಹಾಬ್ ತನ್ನ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಪಾಕಿಸ್ತಾನ ಪರ 27 ಟೆಸ್ಟ್, 91 ಏಕದಿನ ಮತ್ತು 36 ಟಿ20 ಪಂದ್ಯಗಳನ್ನು ಆಡಿದ್ದು, 2020 ರಲ್ಲಿ ವಹಾಬ್ ಪಾಕಿಸ್ತಾನ ತಂಡದ ಪರ ತಮ್ಮ ಕೊನೆಯ ಪಂದ್ಯವನ್ನಾಡಿದ್ದ ರಿಯಾಜ್, ಇತ್ತೀಚಿನ ಸಂದರ್ಶನವೊಂದರಲ್ಲಿ ವಿಶ್ವಕಪ್‌ನಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಆದರೆ ಇದೀಗ ನಿವೃತ್ತಿ ನಿರ್ಧಾರಕ್ಕೆ ಬಂದಿರುವ ರಿಯಾಜ್, 2023ರ ವಿಶ್ವಕಪ್ ಆಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ವಹಾಬ್ ಈ ಹಿಂದೆ 2011, 2015 ಮತ್ತು 2019ರ ವಿಶ್ವಕಪ್​ನಲ್ಲಿ ಪಾಕಿಸ್ತಾನ ಪರ ಆಡಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಪರ ವಹಾಬ್ ರಿಯಾಜ್ 34.50 ಸರಾಸರಿಯಲ್ಲಿ 83 ವಿಕೆಟ್‌ಗಳನ್ನು ಪಡೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 34.30 ಸರಾಸರಿಯಲ್ಲಿ 120 ವಿಕೆಟ್‌ಗಳನ್ನು ಪಡೆದಿರುವ ವಹಾಬ್, ಟಿ20ಯಲ್ಲಿ 28.55ರ ಸರಾಸರಿಯಲ್ಲಿ 34 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2027ರ ಡಿಸೆಂಬರ್ ವೇಳೆಗೆ 175 ಕಿ.ಮೀ ಮೆಟ್ರೋ ಸಂಚಾರ: 3ನೇ ಹಂತದ ಯೋಜನೆಗೆ ಜನವರಿಯಲ್ಲಿ ಟೆಂಡರ್; ಡಿ.ಕೆ ಶಿವಕುಮಾರ್

ಭಾರತ- ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Video

ಬಳ್ಳಾರಿ: ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ನಲ್ಲೇ ಆತ್ಮಹತ್ಯೆಗೆ ಶರಣಾದ ಮುನ್ನಿ!

ಕೇರಳ: ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ವ್ಯಕ್ತಿಯ ಬಂಧನ

ಛತ್ತೀಸ್‌ಗಢ: ಖೈರಾಗಢದಲ್ಲಿ ಸಿಎಎಫ್ ಯೋಧನಿಂದ ಸಹೋದ್ಯೋಗಿಗೆ ಗುಂಡಿಕ್ಕಿ ಹತ್ಯೆ

SCROLL FOR NEXT