ಕ್ರಿಕೆಟ್

3ನೇ ಟಿ20 ಪಂದ್ಯ: ನ್ಯೂಜಿಲೆಂಡ್ ತಂಡದ ಕಳಪೆ ಪ್ರದರ್ಶನದ ಹೊರತಾಗಿಯೂ ದಾಖಲೆ ಬರೆದ ಕಿವೀಸ್ ಬೌಲರ್!

Srinivasamurthy VN

ಅಹ್ಮದಾಬಾದ್: ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 168ರನ್ ಗಳ ಹೀನಾಯ ಸೋಲು ಅನುಭವಿಸಿದ ಹೊರತಾಗಿಯೂ ಇದೇ ಪಂದ್ಯದಲ್ಲಿ ಕಿವೀಸ್ ಬೌಲರ್ ಗಮನಾರ್ಹ ಸಾಧನೆಯೊಂದನ್ನು ಮಾಡಿದ್ದಾರೆ.

ಹೌದು.. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 168ರನ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ನಿಗಧಿತ 50 ಓವರ್ ಗಳಲ್ಲಿ ಶುಭ್ ಮನ್ ಗಿಲ್ ರ ಶತಕ (ಅಜೇಯ 126ರನ್)ದ ನೆರವಿನಿಂದ 4 ವಿಕೆಟ್ ನಷ್ಟಕ್ಕೆ  234 ರನ್ ಪೇರಿಸಿತ್ತು. ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 12.1 ಓವರ್ ನಲ್ಲಿ 66 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ನ್ಯೂಜಿಲೆಂಡ್ 168ರನ್ ಗಳ ಅಂತರದ ಹೀನಾಯ ಸೋಲು ಕಂಡಿತ್ತು.

ಆದರೆ ಭಾರತದ ಬ್ಯಾಟಿಂಗ್ ವೇಳೆ ಭಾರತದ ತ್ರಿಪಾಠಿ ವಿಕೆಟ್ ಪಡೆದ ನ್ಯೂಜಿಲೆಂಡ್ ಬೌಲರ್ ಇಶ್ ಸೋಧಿ ಭಾರತದ ವಿರುದ್ಧ ಗಮನಾರ್ಹ ಸಾಧನೆ ಮಾಡಿದರು. ಇದು ಭಾರತದ ಇಶ್ ಸೋಧಿ ಪಡೆದ 25ನೇ ವಿಕೆಟ್ ಆಗಿದೆ. ಆ ಮೂಲಕ ತಂಡವೊಂದರ ವಿರುದ್ಧ ಗರಿಷ್ಠ ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಇಶ್ ಸೋಧಿ 3ನೇ ಸ್ಥಾನಕ್ಕೇರಿದ್ದಾರೆ. 

ಈ ಪಟ್ಟಿಯಲ್ಲಿ ಅಫ್ಘಾನಿಸ್ತಾನದ ರಷೀದ್ ಖಾನ್ ಅಗ್ರಸ್ಥಾನದಲ್ಲಿದ್ದು ಅವರು ಐರ್ಲೆಂಡ್ ವಿರುದ್ಧ 37 ವಿಕೆಟ್ ಪಡೆದಿದ್ದಾರೆ. ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ ಇದ್ದು ಅವರು ಪಾಕಿಸ್ತಾನದ ವಿರುದ್ಧ 28 ವಿಕೆಟ್ ಕಬಳಿಸಿದ್ದಾರೆ. ಜಿಂಬಾಬ್ವೆ ವಿರುದ್ಧ 24 ವಿಕೆಟ್ ಪಡೆದಿರುವ ಬಾಂಗ್ಲಾದೇಶದ ಮುಸ್ತಫಿಜುರ್ ರೆಹಮಾನ್ 4ನೇ ಸ್ಥಾನದಲ್ಲಿದ್ದಾರೆ.

Most T20I wkts vs an opposition
37 Rashid Khan vs Ireland
28 Tim Southee vs Pakistan
25 Ish Sodhi vs India *
24 Mustafizur Rahman vs Zimbabwe

 

SCROLL FOR NEXT