ಪಾಕಿಸ್ತಾನದಿಂದ ಹೊರಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿ 
ಕ್ರಿಕೆಟ್

ಭಾರತದ ನಡೆಗೆ ಬೆಚ್ಚಿದ ಎಸಿಸಿ: ಪಾಕಿಸ್ತಾನದಿಂದ ಹೊರಗೆ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಯೋಜನೆ?

ಪಾಕಿಸ್ತಾನದಲ್ಲಿ ಏಷ್ಯಾಕಪ್ ಟೂರ್ನಿ ನಡೆದರೆ ತಾನು ಪಾಲ್ಗೊಳ್ಳುವುದಿಲ್ಲ ಎಂಬ ಭಾರತದ ಪ್ರಬಲ ನಡೆಗೆ ಬೆಚ್ಚಿಬಿದ್ದಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಇದೀಗ ಇಡೀ ಟೂರ್ನಿಯನ್ನೇ ಪಾಕಿಸ್ತಾನದಿಂದ ಹೊರಗೆ ಅಂದರೆ ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧರಿಸಿದೆ ಎನ್ನಲಾಗಿದೆ.

ದುಬೈ: ಪಾಕಿಸ್ತಾನದಲ್ಲಿ ಏಷ್ಯಾಕಪ್ ಟೂರ್ನಿ ನಡೆದರೆ ತಾನು ಪಾಲ್ಗೊಳ್ಳುವುದಿಲ್ಲ ಎಂಬ ಭಾರತದ ಪ್ರಬಲ ನಡೆಗೆ ಬೆಚ್ಚಿಬಿದ್ದಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಇದೀಗ ಇಡೀ ಟೂರ್ನಿಯನ್ನೇ ಪಾಕಿಸ್ತಾನದಿಂದ ಹೊರಗೆ ಅಂದರೆ ತಟಸ್ಥ ಸ್ಥಳದಲ್ಲಿ ಆಯೋಜಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಹೌದು... ಏಷ್ಯಾಕಪ್ 2023 (Asia Cup 2023) ಎಲ್ಲಿ ನಡೆಯಲಿದೆ ಎಂಬುದರ ಚರ್ಚೆಗಳು ಮುಂದುವರೆದಿದ್ದು, ಈ ಹಿಂದೆ ಪಾಕಿಸ್ತಾನ್​​ನಲ್ಲಿ ಏಷ್ಯಾಕಪ್ ಆಯೋಜಿಸಿದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂಬುದನ್ನು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸುವಂತೆ ಪಾಕ್​ ಕ್ರಿಕೆಟ್ ಮಂಡಳಿಗೆ ತಿಳಿಸಲಾಗಿತ್ತು. ಇದಾಗ್ಯೂ ಪಾಕ್​ನಲ್ಲೇ ಟೂರ್ನಿ ಆಯೋಜಿಸಲು ಪಿಸಿಬಿ ಬಯಸಿದೆ. ಆದರೆ ಫೆಬ್ರವರಿ 4, ಶನಿವಾರದಂದು ಬಹ್ರೇನ್‌ನಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯ ನಂತರ ತಟಸ್ಥ ಸ್ಥಳದಲ್ಲಿ ಏಷ್ಯಾಕಪ್ ಆಯೋಜನೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.

ಪಿಟಿಐ ವರದಿ ಪ್ರಕಾರ, ಏಷ್ಯಾ ಕಪ್ ಅನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗುವುದಿಲ್ಲ. ಮಾರ್ಚ್‌ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ಹೊಸ ಸ್ಥಳದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ. ಈ ಬಗ್ಗೆ ಪಿಸಿಬಿ ತನ್ನ ನಿರ್ಧಾರವನ್ನು ಬದಲಿಸದಿದ್ದರೆ, ಭಾರತ ತಂಡ ಪಾಕಿಸ್ತಾನಕ್ಕೆ ತೆರಳಿ ಆಡುವುದಿಲ್ಲ ಎಂಬುದು ಖಚಿತ. ಇದೇ ಕಾರಣದಿಂದಾಗಿ ಪಾಕ್ ಕ್ರಿಕೆಟ್ ಮಂಡಳಿ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಯೋಜಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಅಲ್ಲದೆ ಮಾರ್ಚ್​ನಲ್ಲಿ ಮತ್ತೊಂದು ಸಭೆಯನ್ನು ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ ಟೂರ್ನಿಯು ತಟಸ್ಥ ಸ್ಥಳದಲ್ಲಿ ನಡೆಯುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. 

ಪ್ರಸ್ತುತ ಮಾಹಿತಿ ಪ್ರಕಾರ, 2023ರ ಏಷ್ಯಾಕಪ್ ಯುಎಇನಲ್ಲಿ ನಡೆಯುವ ಸಾಧ್ಯತೆ ಹೆಚ್ಚು. ಕಳೆದ ಬಾರಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಟೂರ್ನಿಯನ್ನು ರಾಜಕೀಯ ಬಿಕ್ಕಿಟ್ಟಿನ ಕಾರಣ ಯುಎಇನಲ್ಲಿ ಆಯೋಜಿಸಲಾಗಿತ್ತು. ಅದರಂತೆ ಈ ಬಾರಿ ಕೂಡ ಅರಬರ ನಾಡಿನಲ್ಲಿ ಏಷ್ಯಾಕಪ್ 2023 ನಡೆಯುವ ಸಾಧ್ಯತೆಯಿದೆ. ಏಷ್ಯಾ ಕಪ್ ಅಥವಾ ಅದರ ಸ್ಥಳಾಂತರದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಮುಂದಿನ ಸಭೆಗೆ ಈ ವಿಚಾರವನ್ನು ಮುಂದೂಡಲಾಗಿದೆ. ಮುಂದಿನ ಸಭೆ ನಡೆದಾಗ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ವರ್ಷದ ಮಾರ್ಚ್‌ನಲ್ಲಿ ಸಭೆ ನಡೆಯುವ ನಿರೀಕ್ಷೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಟೂರ್ನಿಗೆ ಕಂಟಕವಾದ ಪಾಕ್ ಆರ್ಥಿಕ ಸಂಕಷ್ಠ
ಪಾಕಿಸ್ತಾನದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯು ತುಂಬಾ ಹದಗೆಟ್ಟಿದ್ದು, ಇಂತಹ ಸಂದರ್ಭದಲ್ಲಿ ಟೂರ್ನಿಯನ್ನು ಆಯೋಜಿಸುವುದು ಕೂಡ ಕಷ್ಟಕರ. ಹೀಗಾಗಿ ಟೂರ್ನಿ ಆಯೋಜನೆಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆಯಲ್ಲಿದೆ. ಈಗಾಗಲೇ ಬಿಸಿಸಿಐ ಟೂರ್ನಿಯಿಂದ ಹೊರಗುಳಿದರೆ ಏಷ್ಯಾಕಪ್​ ಪ್ರಾಯೋಕತ್ವದಲ್ಲೂ ಹಿನ್ನಡೆಯಾಗಲಿದೆ. ಅಷ್ಟೇ ಅಲ್ಲದೆ ಭಾರತ ತಂಡ ಹೊರಗುಳಿದಿರುವ ಕಾರಣ, ಶ್ರೀಲಂಕಾ, ಬಾಂಗ್ಲಾದೇಶ ತಂಡಗಳು ಕೂಡ ಪಾಕಿಸ್ತಾನದಲ್ಲಿ ಟೂರ್ನಿ ಆಡಲು ಹಿಂದೇಟು ಹಾಕಬಹುದು. ಈ ಎಲ್ಲಾ ಕಾರಣಗಳಿಂದ ಪಾಕಿಸ್ತಾನದಲ್ಲಿ ಈ ಬಾರಿ ಏಷ್ಯಾಕಪ್ ನಡೆಯುವುದು ಅನುಮಾನ ಎಂದೇ ಹೇಳಬಹುದು.

ಏಕದಿನ ವಿಶ್ವಕಪ್​ಗೂ ಮುನ್ನ ಏಷ್ಯಾಕಪ್​
2023 ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ. ಅಕ್ಟೋಬರ್​ನಲ್ಲಿ ಶುರುವಾಗಲಿರುವ ಏಕದಿನ ವಿಶ್ವಕಪ್​ಗೂ ಮುನ್ನ ಏಷ್ಯಾಕಪ್​ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಸೆಪ್ಟೆಂಬರ್​ ತಿಂಗಳಲ್ಲಿ ಏಷ್ಯಾಕಪ್ ಜರುಗುವ ಸಾಧ್ಯತೆಯಿದೆ. ಈ ಬಾರಿ ಏಕದಿನ ವಿಶ್ವಕಪ್​ಗೂ ಮುನ್ನ ಟೂರ್ನಿ ನಡೆಯುತ್ತಿರುವುದರಿಂದ 50 ಓವರ್​ಗಳ ಮಾದರಿಯಲ್ಲಿ ಏಷ್ಯಾಕಪ್ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT