ಇಯಾನ್ ಮಾರ್ಗನ್ 
ಕ್ರಿಕೆಟ್

ಎಲ್ಲ ಮಾದರಿಯ ಕ್ರಿಕೆಟ್ ಗೆ ಇಂಗ್ಲೆಂಡ್ ಮಾಜಿ ನಾಯಕ ಇಯಾನ್ ಮಾರ್ಗನ್ ವಿದಾಯ

2019ರ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 36 ವರ್ಷದ  ಐರ್ಲೆಂಡ್ ಮೂಲದ ಬ್ಯಾಟ್ಸ್‌ಮನ್ ನನ್ನು ಕಳೆದ ಜೂನ್‌ನಲ್ಲಿ ಇಂಗ್ಲೆಂಡ್ ತಂಡದ ಏಕದಿನ ನಾಯಕತ್ವದಿಂದ ಕೆಳಗಿಳಸಲಾಗಿತ್ತು. ಆಗಲೇ ವಿದಾಯದ ಮಾತುಗಳನ್ನಾಡಿದ್ದರು.

ಲಂಡನ್: 2019ರ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. 36 ವರ್ಷದ  ಐರ್ಲೆಂಡ್ ಮೂಲದ ಬ್ಯಾಟ್ಸ್‌ಮನ್ ನನ್ನು ಕಳೆದ ಜೂನ್‌ನಲ್ಲಿ ಇಂಗ್ಲೆಂಡ್ ತಂಡದ ಏಕದಿನ ನಾಯಕತ್ವದಿಂದ ಕೆಳಗಿಳಸಲಾಗಿತ್ತು. ಆಗಲೇ ವಿದಾಯದ ಮಾತುಗಳನ್ನಾಡಿದ್ದರು.

126 ಏಕದಿನ ಮತ್ತು 72 ಟಿ20 ಪಂದ್ಯಗಳಲ್ಲಿ ಮಾರ್ಗನ್ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು. ನಾಯಕರಾಗಿ ಎರಡು ಮಾದರಿಗಳಲ್ಲಿ 118 ಗೆಲುವು ಸಾಧಿಸಿರುವುದು ಕೂಡಾ ದಾಖಲೆಯಾಗಿದೆ. ಹೆಮ್ಮೆಯಿಂದಲೇ  ಎಲ್ಲ ಮಾದರಿಯ ಕ್ರಿಕೆಟ್ ಗೆ  ನಿವೃತ್ತಿ ಘೋಷಿಸುವುದಾಗಿ ಅವರು ತಿಳಿಸಿದ್ದಾರೆ.

ಅನೇಕ ಸಮಾಲೋಚನೆ ನಂತರ ಕ್ರಿಕೆಟ್ ಬಿಟ್ಟು ಹೋಗಲು ಇದುವೇ ಸೂಕ್ತ ಸಮಯ ಎಂಬುದನ್ನು ನಾನು ನಂಬುತ್ತೇನೆ. ಪ್ರತಿಯೊಂದು ಕ್ಷಣವನ್ನು ಆನಂದಿಸಿದ್ದೇನೆ. ಎಲ್ಲ ಕ್ರೀಡಾಪಟುವಿನಂತೆ ವೃತ್ತಿ ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿದ್ದೇನೆ. ಕುಟುಂಬ, ಸ್ನೇಹಿತರ ಸಹಕಾರ ಸದಾ ಇತ್ತು. ಈ ಸಂದರ್ಭದಲ್ಲಿ ಪತ್ನಿ, ಕುಟುಂಬ, ಸ್ನೇಹಿತರು , ಕೋಚ್, ಸಹ ಆಟಗಾರರು, ಅಭಿಮಾನಿಗಳಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ ಎಂದು ವಿದಾಯ ಸಂದೇಶದಲ್ಲಿ ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT