ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಹಾರ್ದಿಕ್ ಪಾಂಡ್ಯ ನಾಯಕ

Lingaraj Badiger

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾರ್ಚ್ 17 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಭಾನುವಾರ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯಗೆ ತಂಡದ ನಾಯಕತ್ವ ನೀಡಲಾಗಿದೆ. ಇದರೊಂದಿಗೆ ಟಿ20 ತಂಡದ ನಾಯಕತ್ವದ ಬಳಿಕ ಇದೀಗ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಏಕದಿನ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದು, ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾಗೆ ವಾಪಸಾಗಿದ್ದು, ಎರಡೂ ಟೆಸ್ಟ್‌ಗಳಲ್ಲಿ ಆಲ್​ರೌಂಡರ್​ ಪ್ರದರ್ಶನ ನೀಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈಗ ಏಕದಿನ ತಂಡಕ್ಕೆ ಜಡೇಜಾ ವಾಪಸಾತಿಯಿಂದ ಟೀಂ ಇಂಡಿಯಾ ಮತ್ತಷ್ಟು ಬಲ ಪಡೆಯಲಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.

SCROLL FOR NEXT