ಪೃಥ್ವಿ ಶಾ-ಸಪ್ನಾ ಗಿಲ್ 
ಕ್ರಿಕೆಟ್

ಜಾಮೀನು ಸಿಕ್ಕ ತಕ್ಷಣ ಕ್ರಿಕೆಟಿಗ ಪೃಥ್ವಿ ಶಾ ವಿರುದ್ಧ ಪ್ರಕರಣ ದಾಖಲಿಸಿದ ಸಪ್ನಾ ಗಿಲ್!

ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್‌ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು.

ಕ್ರಿಕೆಟಿಗ ಪೃಥ್ವಿ ಶಾ ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿ ಮತ್ತು ಭೋಜ್‌ಪುರಿ ನಟಿ ಸಪ್ನಾ ಗಿಲ್ ನಡುವಿನ ಜಗಳ ಸಾಕಷ್ಟು ಸುದ್ದಿ ಮಾಡಿತ್ತು. ಈ ಸಂಬಂಧ ಪೃಥ್ವಿ ಶಾ ಸ್ನೇಹಿತರು ಓಶಿವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಪ್ನಾ ಗಿಲ್ ಅನ್ನು ಬಂಧಿಸಿದರು. 

ಸಪ್ನಾ ಗಿಲ್ ಗೆ ಇದೀಗ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕ ತಕ್ಷಣ ಅವರು ಪೃಥ್ವಿ ಶಾ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಸಪ್ನಾ ಗಿಲ್ ಪರ ವಕೀಲ ಕಾಶಿಫ್ ಅಲಿ ಖಾನ್ ಪೃಥ್ವಿ ಶಾ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅವರ ವಿರುದ್ಧ ಸಾರ್ವಜನಿಕ ಅಸಭ್ಯತೆಯ ಪ್ರಕರಣ ದಾಖಲಿಸಿದ್ದಾರೆ.

ಪೃಥ್ವಿ ಶಾ ಅವರು ಸಾರ್ವಜನಿಕ ಅಸಭ್ಯತೆ ಮತ್ತು ದೈಹಿಕ ಹಾನಿಯನ್ನುಂಟು ಮಾಡಿದ್ದಾರೆ ಎಂದು ಸಪ್ನಾ ಗಿಲ್ ಪರ ವಕೀಲರು ಹೇಳಿದ್ದಾರೆ. ಇದಲ್ಲದೇ ಭಾರತೀಯ ಕ್ರಿಕೆಟಿಗ ಸಪ್ನಾ ಗಿಲ್ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಪೃಥ್ವಿ ಶಾ ಮತ್ತು ಇತರರ ವಿರುದ್ಧ ಸೆಕ್ಷನ್ 34, 120 ಬಿ, 144, 146, 148, 149, 323, 324, 351, 354 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಪ್ನಾ ಪರ ವಕೀಲರು ತಿಳಿಸಿದ್ದಾರೆ.

ಈ ಹಿಂದೆ ಪೃಥ್ವಿ ಶಾ ಅವರ ಸ್ನೇಹಿತೆ ಸಪ್ನಾ ಗಿಲ್ ವಿರುದ್ಧ ಸಪ್ನಾ ಗಿಲ್ ವಿರುದ್ಧ ಐಪಿಸಿ ಸೆಕ್ಷನ್ 34, 120-ಎ, 144, 146, 148, 149, 323, 324, 351 ಮತ್ತು 509 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಸಪ್ನಾ ಗಿಲ್ ಅವರನ್ನು ಬಂಧಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT