ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 
ಕ್ರಿಕೆಟ್

ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ; 1-0 ಮುನ್ನಡೆ

ಮುಂಬೈ ನಲ್ಲಿ ನಡೆದ ಭಾರತ-ಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಪ್ರವಾಸಿ ತಂಡವನ್ನು 2 ರನ್ ಗಳ ಅಂತರದಿಂದ ಮಣಿಸಿ ರೋಚಕ ಜಯವನ್ನು ತನ್ನದಾಗಿಸಿಕೊಂಡಿದೆ. 

ಮುಂಬೈ: ಮುಂಬೈ ನಲ್ಲಿ ನಡೆದ ಭಾರತ-ಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ಪ್ರವಾಸಿ ತಂಡವನ್ನು 2 ರನ್ ಗಳ ಅಂತರದಿಂದ ಮಣಿಸಿ ರೋಚಕ ಜಯವನ್ನು ತನ್ನದಾಗಿಸಿಕೊಂಡಿದೆ. 

ಆರಂಭದಲ್ಲಿ ಲಂಕಾ ಪಂದ್ಯದ ಮೇಲೆ ಉತ್ತಮ ಹಿಡಿತ ಸಾಧಿಸಿತ್ತು. ಆದರೆ ಶಿವಂ ಮಾವಿ ಅವರ ಬೌಲಿಂಗ್ ನಿಂದಾಗಿ ಕೊನೆಯ ಕ್ಷಣದಲ್ಲಿ ಲಂಕಾ ಪಂದ್ಯದ ಮೇಲಿನ ಹಿಡಿತವನ್ನು ಕಳೆದುಕೊಂಡಿತ್ತು.

ಭಾರತ ನೀಡಿದ್ದ 163 ರನ್ ಗಳ ಗುರಿಯನ್ನು ಬೆನ್ನಟ್ಟಿದ ಲಂಕಾ ಪಡೆಗೆ ಕೊನೆಯ ಓವರ್ ವೇಳೆಗೆ ಗೆಲ್ಲುವುದಕ್ಕೆ 13 ರನ್ ಗಳ ಅಗತ್ಯವಿತ್ತು. ಅಕ್ಷರ್ ಪಟೇಲ್ ಅವರು ಎಸೆದ ಕೊನೆಯ ಓವರ್ ನಲ್ಲಿ ಮೊದಲ 2 ಎಸೆತಗಳಲ್ಲಿ ತಲಾ ಒಂದು ರನ್ ಮೂರನೇ ಎಸೆತದಲ್ಲಿ 6, 4 ರಲ್ಲಿ ಯಾವುದೇ ರನ್ ಬರಲಿಲ್ಲ 5 ಮತ್ತು 6 ನೇ ಎಸೆತದಲ್ಲಿ ಬ್ಯಾಟ್ಸ್ಮನ್ ಗಳು ವಿಕೆಟ್ ಒಪ್ಪಿಸುವ ಮೂಲಕ ಭಾರತ 2 ರನ್ ಗಳ ಜಯ ಗಳಿಸಿತು.

ಭಾರತದ ಬ್ಯಾಟಿಂಗ್ ವಿಭಾದಲ್ಲಿಯೂ ಅಕ್ಷರ್ ಪಟೇಲ್ ಮಿಂಚಿದರು, ದೀಪಕ್ ಹೂಡಾ ಸಹ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಬೌಲಿಂಗ್ ವಿಭಾಗದಲ್ಲಿ ಶಿವಂ ಮಾವಿ ಗಮನ ಸೆಳೆದರು ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾದ ಗೆಲುವಿನ ಓಟ ಮುಂದುವರಿಸಿದೆ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT