ಕ್ರಿಕೆಟ್

1ನೇ ಟಿ20 ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ

Srinivasamurthy VN

ಮುಂಬೈ: ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಶ್ರೀಲಂಕಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಭಾರತ ಪ್ರವಾಸ ಆರಂಭವಾಗಿದ್ದು, ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ನಾಯಕ ದಾಸುನ್ ಶನಕ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೆ ಉಭಯ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಹಾಲಿ ಸರಣಿ ಉಭಯ ತಂಡಗಳಿಗೆ ಪ್ರಮುಖವಾಗಿವೆ.

ಇನ್ನು ಇಂದಿನ ಪಂದ್ಯದಲ್ಲಿ ಭಾರತದ ಪರ ಇಬ್ಬರು ಆಟಗಾರರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದು, ಶುಭ್ ಮನ್ ಗಿಲ್ ಮತ್ತು ಶಿವಂ ಮಾವಿ ತಂಡದ ನಾಯಕ ಹಾರ್ದಿಕ್ ಪಾಂಡ್ಯಾ ಮತ್ತು ಉಪನಾಯಕ ಸೂರ್ಯಕುಮಾರ್ ಯಾದವ್ ರಿಂದ ಕ್ಯಾಪ್ ಪಡೆದಿದ್ದಾರೆ.

ಉಳಿದಂತೆ ಆಟಗಾರರ ಪಟ್ಟಿ ಇಂತಿದೆ.
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ

ಭಾರತ: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
 

SCROLL FOR NEXT