ದ್ರಾವಿಡ್ ಮತ್ತಿತರರ ಆಟಗಾರರು 
ಕ್ರಿಕೆಟ್

ರಿಷಭ್ ಪಂತ್ ಶೀಘ್ರ ಚೇತರಿಕೆಗೆ ದ್ರಾವಿಡ್, ಹಾರ್ದಿಕ್ ಸೇರಿದಂತೆ ಟೀಂ ಇಂಡಿಯಾ ಆಟಗಾರರ ಹಾರೈಕೆ- ವಿಡಿಯೋ

ಇತ್ತೀಚಿಗೆ ಭೀಕರ ಕಾರು ಅಪಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ಯಾಟರ್ ರಿಷಭ್ ಪಂತ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೋಚ್ ರಾಹುಲ್ ದ್ರಾವಿಡ್, ಹಾರ್ದಿಕ್ ಪಾಂಡ್ಯ, ಸೂರ್ಯ ಕುಮಾರ್ ಯಾದವ್ ಸೇರಿದಂತೆ ಅನೇಕ ಟೀಂ ಇಂಡಿಯಾ ಆಟಗಾರರು ಹಾರೈಸಿದ್ದಾರೆ. 

ನವದೆಹಲಿ: ಇತ್ತೀಚಿಗೆ ಭೀಕರ ಕಾರು ಅಪಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ಯಾಟರ್ ರಿಷಭ್ ಪಂತ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಕೋಚ್ ರಾಹುಲ್ ದ್ರಾವಿಡ್, ಹಾರ್ದಿಕ್ ಪಾಂಡ್ಯ, ಸೂರ್ಯ ಕುಮಾರ್ ಯಾದವ್ ಸೇರಿದಂತೆ ಅನೇಕ ಟೀಂ ಇಂಡಿಯಾ ಆಟಗಾರರು ಹಾರೈಸಿದ್ದಾರೆ. 

'ರಿಷಭ್ ಶೀಘ್ರವಾಗಿ ಚೇತರಿಸಿಕೊಳ್ಳುತ್ತೀಯಾ ಎಂಬ ವಿಶ್ವಾಸವಿದೆ. ಕಳೆದ ಒಂದು ವರ್ಷದಲ್ಲಿ ನಾವು ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಭಾರತೀಯ ಟೆಸ್ಟ್ ಇತಿಹಾಸದಲ್ಲಿ ಕೆಲವು ಅತ್ಯುತ್ತಮವಾದ ಇನ್ನಿಂಗ್ಸ್ ಗಳಲ್ಲಿ ನೀವು ಆಡಿರುವುದನ್ನು ನೋಡಿದ್ದೇನೆ. ಇದೊಂದು ನಿಮಗೆ ಸವಾಲು. ಈ ವರ್ಷ ಅನೇಕ ಸಂದರ್ಭಗಳಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲಿರುವಂತೆಯೇ, ಈ ಸವಾಲನ್ನು ಸಾಧಿಸಿ, ಶೀಘ್ರದಲ್ಲಿಯೇ ಟೀಂ ಇಂಡಿಯಾಕ್ಕೆ ಮರಳುವುದನ್ನು ಎದುರು ನೋಡುತ್ತಿರುವುದಾಗಿ ದ್ರಾವಿಡ್ ಶುಭ ಹಾರೈಕೆಯ ವಿಡಿಯೋವನ್ನು ಬಿಸಿಸಿಐ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ. 

ಹಾರ್ದಿಕ್ ಪಾಂಡ್ಯ, ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶಾನ್, ಚಾಹಲ್ ಮತ್ತು ಶುಭ್ ಮನ್ ಗಿಲ್ ಶುಭ ಹಾರೈಸಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್  ಮೈದಾನಕ್ಕೆ ಮರಳಲು ಕೆಲವು ತಿಂಗಳು ಹಿಡಿಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!