ಕ್ರಿಕೆಟ್

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಬೂಮ್ರಾ ಹೊರಗೆ: ಬಿಸಿಸಿಐ

Nagaraja AB

ನವದೆಹಲಿ: ಬೌಲಿಂಗ್ ನಲ್ಲಿ ಸ್ಥಿರತೆ ಬೆಳೆಸಿಕೊಳ್ಳಲು ವೇಗಿ ಜಸ್ಪ್ರೀತ್ ಬೂಮ್ರಾ ಅವರಿಗೆ ಇನ್ನೂ ಹೆಚ್ಚಿನ ಸಮಯದ ಅಗತ್ಯವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಸೋಮವಾರ ಹೇಳಿದೆ.

ಏಕದಿನ ಸರಣಿಗೂ ಮುನ್ನ ಗುವಾಹಟಿಯಲ್ಲಿ ತಂಡವನ್ನು ಸೇರಿಕೊಳ್ಳಬೇಕಿತ್ತು. ಆದರೆ, ಬೌಲಿಂಗ್‌ನಲ್ಲಿ ಚೇತರಿಸಿಕೊಳ್ಳಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ. ಹಾಗಾಗೀ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ  ಪ್ರಕಟಣೆಯಲ್ಲಿ ತಿಳಿಸಿದೆ. ಬುಮ್ರಾಗೆ ಯಾವುದೇ ಬದಲಿ ಆಟಗಾರನನ್ನು ಆಯ್ಕೆದಾರರು ಹೆಸರಿಸಿಲ್ಲ.

ಮಂಗಳವಾರದಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ಭಾರತ ತಂಡದಲ್ಲಿ ಬುಮ್ರಾ ಅವರನ್ನು ಹೆಸರಿಸಲಾಗಿತ್ತು. ಮುಂದಿನ ತಿಂಗಳು ಆಸ್ಟ್ರೇಲಿಯಾ ವಿರುದ್ಧದ ಎಲ್ಲಾ ಪ್ರಮುಖ ನಾಲ್ಕು ಟೆಸ್ಟ್ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಸಹಾಯಕ ಸಿಬ್ಬಂದಿ ಮತ್ತು ವೈದ್ಯಕೀಯ ತಂಡವು ಬೂಮ್ರಾ  ಚೇತರಿಸಿಕೊಳ್ಳಲು ಇನ್ನೂ ಸ್ವಲ್ಪ ಸಮಯಾವಕಾಶ ನೀಡಲು ನಿರ್ಧರಿಸಿದೆ. ಬುಮ್ರಾ ತಂಡದೊಂದಿಗೆ ಗುವಾಹಟಿಗೆ ಪ್ರಯಾಣಿಸಿಲ್ಲ. ಅವರು ಪೂರ್ಣ ಫಿಟ್‌ನೆಸ್‌ಗೆ ಮರಳಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. 

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ , ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಶದೀಪ್ ಸಿಂಗ್.

SCROLL FOR NEXT